ಸ್ಯಾಂಡಲ್ವುಡ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಎಲ್ಲರನ್ನೂ ಅಗಲಿ ಮೂರು ವರ್ಷಗಳಾಗುತ್ತಾ ಬಂದರೂ ಅವರ ನೆನಪು ಸದಾ ಹಸಿರು. ಹಲವಾರು ನಟರು ಮಾತ್ರವಲ್ಲದೇ ಗಾಯಕರು, ನಿರ್ದೇಶಕರು ಸೇರಿದಂತೆ ಸಾಮಾನ್ಯ ಜನರನ್ನೂ ಅವರು ಹುರಿದುಂಬಿಸುತ್ತಿದ್ದ ರೀತಿಯೇ ಚೆಂದ. ಇದೇ ಕಾರಣಕ್ಕೆ ಅವರು ಎಲ್ಲರನ್ನೂ ಅಗಲಿದರೂ ಅವರ ನೆನಪನ್ನು ಸಿನಿ ಕ್ಷೇತ್ರದವರು ಸೇರಿದಂತೆ ಎಲ್ಲರೂ ಮಾಡುತ್ತಲೇ ಇರುತ್ತಾರೆ.
ಇದೀಗ ಸೌತ್ ಆ್ಯಂಡ್ ಸರ್ಕಲ್ನಲ್ಲಿ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ರವರ ಕಂಚಿನ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಲಾಯಿತು.
ಸೌತ್ ಆ್ಯಂಡ್ ಸರ್ಕಲ್ನಲ್ಲಿ ಪುನೀತ್ ರಾಜಕುಮಾರ್ ಅವರ ಪುತ್ಥಳಿಯನ್ನು ಅನಾವರಣಗೊಳಿಸುವ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಅಶ್ವಿನಿ ಪುನೀತ್ ರಾಜ್ ಕುಮಾರ್, ಶ್ರೀ ಎನ್ ಆರ್ ರಮೇಶ್, ಶ್ರೀ ಎ ಹೆಚ್ ಬಸವರಾಜು ಉಪಸ್ಥಿತರಿದ್ದರು. ಇನ್ನು ದೊಡ್ಮನೆ ಕುಟುಂಬದ ಅಭಿಮಾನಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : ಬಿಲ್ಡರ್ ಮಂಜುನಾಥ್ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ..!