ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಅವರು ಉದ್ಯಮಿ ವೆಂಕಟ ದತ್ತ ಸಾಯಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಎಂಗೇಜ್ಮೆಂಟ್ ಫೋಟೋವನ್ನು ಸಿಂಧು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಡಿಸೆಂಬರ್ 22 ರಂದು ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಭಾರತದ ಅತ್ಯಂತ ಯಶಸ್ವಿ ಕ್ರೀಡಾಪಟುಗಳಲ್ಲಿ ಒಬ್ಬರಾದ ಸಿಂಧು ಸ್ಟಾರ್ ಬ್ಯಾಡ್ಮಿಂಟನ್ ಪ್ಲೇಯರ್ ಆಗಿದ್ದಾರೆ. ಹಲವಾರು ಪ್ರಶಸ್ತಿಗಳನ್ನು ಭಾರತಕ್ಕೆ ತಂದು ಕೊಟ್ಟು ದೇಶದ ಕೀರ್ತಿಯನ್ನು ಬೆಳಗಿಸಿದ್ದಾರೆ.
2024ರಲ್ಲಿ ಇತ್ತೀಚೆಗೆ ನಡೆದ ಏಷ್ಯಾ ಟೀಮ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದರು. ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 01 ಬಾರಿ ಬಂಗಾರದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಒಲಿಂಪಿಕ್ ಗೇಮ್ಸ್, ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್ ಸೇರಿದಂತೆ ಇನ್ನು ಕೆಲ ಗೇಮ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಅವರು ಮದುವೆ ಆಗುತ್ತಿರುವ ವೆಂಕಟ ದತ್ತ ಸಾಯಿ ಅವರು ಸಕ್ಸಸ್ಫುಲ್ ಉದ್ಯಮಿಯಾಗಿದ್ದಾರೆ.
ವೆಂಕಟ ದತ್ತ ಸಾಯಿ, ಸದ್ಯ Posidex Technologies ಸಂಸ್ಥೆಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿದ್ದಾರೆ. ಲಿಬರಲ್ ಸ್ಟಡೀಸ್ನಲ್ಲಿ ಡಿಪ್ಲೊಮಾ ಪದವಿ ಪಡೆದುಕೊಂಡಿದ್ದಾರೆ. Flame Universityಯಲ್ಲಿ ಬಿಬಿಎ ಅಕೌಂಟಿಂಗ್ ಮತ್ತು ಫಿನಾನ್ಸ್ ಪದವಿ ಮುಗಿಸಿದ್ದಾರೆ.
ಇದನ್ನೂ ಓದಿ : ರಜತ್, ಧನರಾಜ್ ಜಗಳಕ್ಕೆ ವಾರ್ನಿಂಗ್ ಕೊಟ್ಟು ಶಿಕ್ಷೆ ವಿಧಿಸಿದ ಕಿಚ್ಚ ಸುದೀಪ್..!