ಸ್ಯಾಂಡಲ್‌ವುಡ್‌ನ ಡಿಂಪಲ್ ಕ್ವೀನ್ ರಚಿತಾ ರಾಮ್ ಅಕ್ಟೋಬರ್ 3ರಂದು 32ನೇ ವಸಂತಕ್ಕೆ ಕಾಲಿಡಲಿದ್ದಾರೆ. ತಮ್ಮ ನೆಚ್ಚಿನ ನಟಿಯೊಂದಿಗೆ ಹುಟ್ಟುಹಬ್ಬವನ್ನು ಆಚರಣೆ ಮಾಡಬೇಕು ಅಂತ ಅಭಿಮಾನಿಗಳು ನಿರ್ಧರಿಸಿದ್ದರು. ರಚ್ಚು ಬರ್ತ್ ಡೇ ಅಂತ ಫ್ಯಾನ್ಸ್ ಖುಷಿಯಾಗಿದ್ರೆ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಅಂತ ರಚಿತಾ ರಾಮ್ ಘೋಷಣೆ ಮಾಡಿ, ಫ್ಯಾನ್ಸ್‌ಗೆ ನಿರಾಸೆಗೊಳಿಸಿದ್ದಾರೆ.
ಈ ಬಗ್ಗೆ ಸ್ವತ: ಡಿಂಪಲ್ ಕ್ವೀನ್ ರಚಿತಾ ರಾಮ್ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿಯೇ ಬರೆದುಕೊಂಡಿದ್ದಾರೆ. ಎಲ್ಲರಿಗೂ ನಮಸ್ಕಾರ, ಎಲ್ಲರೂ ಚೆನ್ನಾಗಿದ್ದೀರಿ ಎಂದು ಭಾವಿಸುತ್ತೇನೆ. ಈ ಬಾರಿ ಚಿತ್ರೀಕರಣ ಇರುವುದರಿಂದ ನನ್ನ ಹುಟ್ಟುಹಬ್ಬ (ಅ.3) ಆಚರಣೆಯನ್ನು ಮಾಡಿಕೊಳ್ಳುತ್ತಿಲ್ಲ ಎಂದು ಹೇಳಲು ಇಚ್ಚಿಸುತ್ತೇನೆ. ಎಲ್ಲರಿಗೂ ಕ್ಷಮೆಯಾಚಿಸುತ್ತಾ ಎಂದಿನಂತೆ ಪ್ರತಿ ಭಾನುವಾರ ಚಿತ್ರೀಕರಣ ಮುಗಿಸಿ ಬಂದ ನಂತರ ಸಿಗುತ್ತೇನೆ ಎಂದು ನಟಿ ಮನವಿ ಮಾಡಿದ್ದಾರೆ.
ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ರಚಿತಾ ರಾಮ್ ತಮ್ಮ ಅಭಿಮಾನಿಗಳಿಗೆ ಸಂದೇಶ ಕೊಟ್ಟಿದ್ದಾರೆ. ಈ ಫೋಸ್ಟ್ ಅವರ ಫ್ಯಾನ್ಸ್‌ಗೆ ಬೇಸರ ತರಿಸಿದ್ದರೂ, ಭಾನುವಾರ ಭೇಟಿ ಮಾಡುತ್ತೇನೆ ಎಂದು ಹೇಳಿದ್ದು ಸಮಾಧಾನ ತಂದಿದೆ.
ಇದನ್ನೂ ಓದಿ : ಮುಡಾ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡ್ತಾ ಇದೆ – ಡಾ.ಜಿ ಪರಮೇಶ್ವರ್..!