ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸಹಚರ 4ನೇ ಆರೋಪಿಯಾಗಿರುವ ರಘು ಅವರ ತಾಯಿ ನಿಧನರಾಗಿದ್ದಾರೆ. 65 ವರ್ಷ ವಯಸ್ಸಿನ ತಾಯಿ ಮಂಜುಳಮ್ಮ ಚಿತ್ರದುರ್ಗದ ಕೋಳಿ ಬುರುಜನಹಟ್ಟಿ ನಿವಾಸದಲ್ಲಿ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮಂಜುಳಮ್ಮ ಸಾವನ್ನಪ್ಪಿದ್ದಾರೆ. ಅತ್ತ ಮಗ ರಘು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಖೈದಿಯಾಗಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಮಗ ಜೈಲು ಸೇರಿದ ನಂತರ ತಾಯಿ ತುಂಬಾ ನೊಂದಿದ್ದರು. ಅವತ್ತಿನಿಂದಲೇ ತಾಯಿಯ ಆರೋಗ್ಯ ಹದಗೆಟ್ಟಿತ್ತು. ಇಂದು ಮುಂಜಾನೆ ಅವರು ನಿಧನರಾಗಿದ್ದಾರೆ.
ಇತ್ತೀಚೆಗೆ ಇದೇ ಕೇಸ್ನಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿ ಅನಿಲ್ ತಂದೆ ಕೂಡ ಮೃತಪಟ್ಟಿದ್ದರು. ಮಗನ ನೆನಪು ಮತ್ತು ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಇದೀಗ A4 ಆರೋಪಿ ರಘು ತಾಯಿ ಕೂಡ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ : KRS ಡ್ಯಾಂ ಭರ್ತಿಗೆ ಕ್ಷಣಗಣನೆ – ನದಿಗೆ 1 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆ..!