Download Our App

Follow us

Home » ಸಿನಿಮಾ » ಕರ್ನಾಟಕ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿ ಉದ್ಘಾಟಿಸಿದ ರಾಗಿಣಿ ದ್ವಿವೇದಿ..!

ಕರ್ನಾಟಕ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿ ಉದ್ಘಾಟಿಸಿದ ರಾಗಿಣಿ ದ್ವಿವೇದಿ..!

ಸ್ಯಾಂಡಲ್‌ವುಡ್ ಬ್ಯೂಟಿ ರಾಗಿಣಿ ದ್ವಿವೇದಿ ಅವರು ಕರ್ನಾಟಕ ರಾಜ್ಯ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶಿವರಾಜ್, ಗೌರವಾಧ್ಯಕ್ಷರಾದ ರವಿಶಂಕರ್, ಸಂಘದ ಪದಾಧಿಕಾರಿಗಳು ಹಾಗೂ ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟದ ವಿವಿಧ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಉದ್ಘಾಟನೆ ಮಾಡಿದ ಬಳಿ ಮಾತನಾಡಿದ ನಟಿ ರಾಗಿಣಿ ದ್ವಿವೇದಿ ಅವರು, ಕಲಾವಿದರು ಅಂದವಾಗಿ ಕಾಣಲು ಅವರು ಹಾಕುವ ಉಡುಗೆಯೇ ಕಾರಣ. ಅಂತಹ‌ ವಸ್ತ್ರವನ್ನು ನಮಗೆ ಸರಿ ಹೊಂದುವ ಹಾಗೆ ಸಿದ್ದಪಡಿಸಿಕೊಡುವಲ್ಲಿ ವಸ್ತ್ರಾಲಂಕಾರ ಕಲಾವಿದರ ಪಾತ್ರ ದೊಡ್ಡದು. ಸಂಘದ ಹೊಸ ಕಛೇರಿ ಉದ್ಘಾಟನೆ ಹಾಗೂ ಪೂಜಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಹಳ ಸಂತೋಷವಾಗಿದೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹಾರೈಸಿದರು.

ಕರ್ನಾಟಕ ರಾಜ್ಯ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ಶಿವರಾಜ್ ಮಾತನಾಡಿ, ಮೂವತ್ತೈದು ವರ್ಷಗಳ ಇತಿಹಾಸವಿರುವ ನಮ್ಮ ಸಂಘದ ಹೊಸ ಕಛೇರಿ ಉದ್ಘಾಟನೆ ಹಾಗೂ ಆಯುಧ ಪೂಜಾ ಸಮಾರಂಭಕ್ಕೆ ಆಗಮಿಸಿರುವ ರಾಗಿಣಿ ಅವರಿಗೆ ಹಾಗೂ ಎಲ್ಲಾ ಗಣ್ಯರಿಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ ಸಂಘದಲ್ಲಿ 250ಕ್ಕೂ ಅಧಿಕ ಜನ ಸದಸ್ಯರಿದ್ದಾರೆ. ಎಲ್ಲರ ಸಹಕಾರದಿಂದ ನಮ್ಮ ಸಂಘದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಜನವರಿಯಲ್ಲಿ ಸಂಘದ ಮೂವತ್ತೈದನೇ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಚರಿಸಲಿದ್ದೇವೆ ಎಂದು ತಿಳಿಸಿದರು.

ಇನ್ನು ಒಕ್ಕೂಟದ ಖಜಾಂಚಿ ಸೋಮು, ಹಿರಿಯ ನಿರ್ಮಾಣ ನಿರ್ವಾಹಕರಾದ ಪ್ರಕಾಶ್ ಮುಂತಾದವರು ಈ ಸಂದರ್ಭದಲ್ಲಿ ಮಾತನಾಡಿ ಶುಭ ಹಾರೈಸಿದರು.

ಇದನ್ನೂ ಓದಿ : ಮುಡಾ ಕಚೇರಿ ಮೇಲೆ ED ರೇಡ್ -​​ ಅಸಮಾಧಾನ ಹೊರಹಾಕಿದ ಮಾಜಿ ಸಂಸದ ಡಿ.ಕೆ.ಸುರೇಶ್..!

Leave a Comment

DG Ad

RELATED LATEST NEWS

Top Headlines

ನಟ ದರ್ಶನ್​ಗೆ ನಾಳೆ ನಿರ್ಣಾಯಕ ದಿನ – ಏನಾಗಲಿದೆ ಬೇಲ್ ಭವಿಷ್ಯ?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿರುವ ನಟ ದರ್ಶನ್​​ಗೆ ನಾಳೆ ನಿರ್ಣಾಯಕ ದಿನವಾಗಿದೆ. ಮಧ್ಯಂತರ ಜಾಮೀನು ಪಡೆದು ಜೈಲಿಂದ ಹೊರಗೆ ಬಂದಿರುವ ನಟ ದರ್ಶನ್ ಸದ್ಯ

Live Cricket

Add Your Heading Text Here