Download Our App

Follow us

Home » ರಾಜಕೀಯ » ಮಾನನಷ್ಟ ಮೊಕದ್ದಮೆ : ಇಂದು ಬೆಂಗಳೂರು ಕೋರ್ಟ್​ಗೆ ರಾಹುಲ್ ಗಾಂಧಿ ಹಾಜರು..!

ಮಾನನಷ್ಟ ಮೊಕದ್ದಮೆ : ಇಂದು ಬೆಂಗಳೂರು ಕೋರ್ಟ್​ಗೆ ರಾಹುಲ್ ಗಾಂಧಿ ಹಾಜರು..!

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಾನನಷ್ಟ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಲು ಇಂದು (ಜೂ.7) ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 10:30ಕ್ಕೆ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.1ರಂದು ವಿಚಾರಣೆ ನಡೆಸಿದ್ದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಗೈರಾಗಿದ್ದ ರಾಹುಲ್ ಗಾಂಧಿಯವರಿಗೆ ಜೂನ್ 7 ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿತ್ತು.

ಈ ಹಿಂದೆ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಈ ಕಾರಣಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕೋರ್ಟ್ ಗೆ ಹಾಜರಾಗಿದ್ದರು. ಆದರೆ ರಾಹುಲ್ ಗಾಂಧಿಯವರು ಗೈರಾಗಿದ್ದರು.

ರಾಹುಲ್ ಗಾಂಧಿಯವರು ವಿಚಾರಣೆ ಬಳಿಕ 11:30ಕ್ಕೆ ಭಾರತ್ ಜೋಡೋ ಭವನದಲ್ಲಿ ಲೋಕಸಭಾ ಚುನಾವಣೆಯಲ್ಲಿ ವಿಜೇತ, ಪರಾಜಿತ ಅಭ್ಯರ್ಥಿಗಳ ಜೊತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉಪಸ್ಥಿತರಿರಲಿದ್ದಾರೆ.

ಪ್ರಕರಣದ ಹಿನ್ನೆಲೆ : ಕಳೆದ ವಿಧಾನಸಭೆ ಚುನಾವಣೆ ವೇಳೆ 2023ರ ಮೇ 5ರಂದು ಎಲ್ಲ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನ ಅಡಿ ವಿವಿಧ ಹುದ್ದೆಗಳಿಗೆ ಬಿಜೆಪಿ ಲಂಚ ನಿಗದಿಪಡಿಸಿದೆ ಎಂದು ಆರೋಪಿಸಿತ್ತು. ಅಲ್ಲದೇ, ಕೋವಿಡ್‌ ಸಾಮಗ್ರಿಗಳ ಪೂರೈಕೆ, ಲೋಕೋಪಯೋಗಿ ಗುತ್ತಿಗೆಗಳು, ಮಠಗಳಿಗೆ ಅನುದಾನ, ಶಾಲೆಗಳಿಗೆ ಮೊಟ್ಟೆ ಪೂರೈಕೆ, ರಸ್ತೆ ಕಾಮಗಾರಿಗಳಲ್ಲಿ ಕಮಿಷನ್‌ ಪಡೆಯಲಾಗುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಪತ್ರಿಕೆಗಳಿಗೆ ನೀಡಿದ ಜಾಹೀರಾತಿನ ಕೊನೆಯಲ್ಲಿ ಶೇ. 40 ಕಮಿಷನ್​ನ (ಬಿಜೆಪಿ) ಸರ್ಕಾರವು 1.5 ಲಕ್ಷ ಕೋಟಿ ರೂ.ಗಳನ್ನು ಕಳೆದ ನಾಲ್ಕು ವರ್ಷಗಳಲ್ಲಿ ಲೂಟಿ ಮಾಡಿದೆ ಎಂದು ಆರೋಪಿಸಿತ್ತು. ಡಬಲ್‌ ಎಂಜಿನ್‌ ಸರ್ಕಾರಕ್ಕೆ ಬದಲಾಗಿ, ಟ್ರಬಲ್‌ ಎಂಜಿನ್‌ ಸರ್ಕಾರ ಎಂದು ಹೇಳುವ ಮೂಲಕ ಬಿಜೆಪಿಯ ವರ್ಚಸ್ಸಿಗೆ ಹಾನಿ ಮಾಡಿ, ಚುನಾವಣೆಯಲ್ಲಿ ಗೆಲುವಿಗೆ ಅಡ್ಡಿಪಡಿಸಲಾಗಿದೆ ಎಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ ರಾಹುಲ್‌ ಗಾಂಧಿ ವಿರುದ್ದ ಬಿಜೆಪಿ ಖಾಸಗಿ ದೂರು ದಾಖಲಿಸಿತ್ತು.

ಇದನ್ನೂ ಓದಿ : ರಾಯಚೂರಿನಲ್ಲಿ ಬಿಯರ್ ತುಂಬಿದ ಲಾರಿ ಪಲ್ಟಿ : ಬಿಯರ್​​ಗಾಗಿ ಮುಗಿಬಿದ್ದ ಜನ..!

 

 

 

 

 

 

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here