ಮಂಡ್ಯ : ನಾಳೆ ರಾಜ್ಯದಲ್ಲಿ ರಾಹುಲ್ ಗಾಂಧಿ ಆರ್ಭಟಿಸಲು ಸಜ್ಜಾಗಿದ್ದಾರೆ. ಮಂಡ್ಯ ಹಾಗೂ ಕೋಲಾರದಲ್ಲಿ ರಾಹುಲ್ ಗಾಂಧಿ ಬೃಹತ್ ಸಮಾವೇಶ ನಡೆಯಲಿದ್ದು, ಮೋದಿ ಬಂದು ಹೋದ ಬೆನ್ನಲ್ಲೇ ಕಾಂಗ್ರೆಸ್ ಹವಾ ತೋರಿಸಲು ತಂತ್ರ ರೂಪಿಸಲಾಗಿದೆ. ಹಳೆ ಮೈಸೂರು ಭಾಗದಲ್ಲಿ ಎರಡು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಈ ಮೂಲಕ ಮಂಡ್ಯ-ಕೋಲಾರದಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ನ ಶಕ್ತಿ ಪ್ರದರ್ಶಿಸಲಿದ್ದಾರೆ.
ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ಬೆಳಗ್ಗೆ 11 ಗಂಟೆಗೆ ಸಮಾವೇಶ ಆಯೋಜನೆ ಮಾಡಲಾಗಿದೆ. ಸ್ಟಾರ್ ಚಂದ್ರು ಪರವಾಗಿ ರಾಹುಲ್ ಪ್ರಚಾರ ಮಾಡಲಿದ್ದಾರೆ. ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸಿ ಅಬ್ಬರಕ್ಕೆ ಕಾಂಗ್ರೆಸ್ ಸಜ್ಜಾಗಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಸಚಿವ ಚೆಲುವರಾಯಸ್ವಾಮಿ, ರವಿಕುಮಾರ್ ಗೌಡ ಸೇರಿದಂತೆ ಮಂಡ್ಯದ ಶಾಸಕರು ಸಾಥ್ ನೀಡಲಿದ್ದಾರೆ. ಮಂಡ್ಯ ಗೆಲ್ಲಲು ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಭರ್ಜರಿ ತಂತ್ರಗಾರಿಕೆ ರೆಡಿ ಮಾಡಿದ್ದು, ಬೃಹತ್ ಬಹಿರಂಗ ಸಮಾವೇಶ ಆಯೋಜಿಸಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಲಿದೆ.
ಸಕ್ಕರೆ ನಾಡಿನ ಮತ ಬೇಟೆಯ ಬಳಿಕ ಚಿನ್ನದ ನಾಡಿಗೆ ರಾಹುಲ್ ಗಾಂಧಿ ಎಂಟ್ರಿ ಕೊಡಲಿದ್ದಾರೆ. ಕೋಲಾರದಲ್ಲಿ ಮುನಿಸು ಶಮನ ಮಾಡಿ ಒಗ್ಗಟ್ಟು ಪ್ರದರ್ಶನಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಮುನಿಯಪ್ಪ-ರಮೇಶ್ ಕುಮಾರ್ ಬಣದ ಮುನಿಸು ಶಮನಕ್ಕೆ ವೇದಿಕೆ ಸಿದ್ದವಾಗಿದ್ದು, ಭಿನ್ನಮತ ಶಮನ ಮಾಡಿ ಒಂದೇ ವೇದಿಕೆಯಲ್ಲಿ ಎಲ್ಲರನ್ನು ಸೇರಿಸಲು ತಂತ್ರ ರೂಪಿಸಲಾಗಿದೆ.
ಮಧ್ಯಾಹ್ನ 3 ಗಂಟೆಗೆ ಕೋಲಾರದ ಮಾಲೂರು ತಾಲೂಕಿನ ಚೋಕಂಡಹಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ರಾಹುಲ್ ಗಾಂಧಿಯವರು ಕೆ.ವಿ.ಗೌತಮ್ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಕೋಲಾರ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ತಗೆದುಕೊಳ್ಳಲು ತಂತ್ರಗಾರಿಕೆ ನಡೆಸುತ್ತಿದ್ದು, ಕಾಂಗ್ರೆಸ್ ನಾಯಕರು ಒಂದೊಂದು ಕ್ಷೇತ್ರವನ್ನೂ ಗಂಭೀರವಾಗಿ ಪರಿಗಣಿಸಿದ್ದಾರೆ.
ಇದನ್ನೂ ಓದಿ : ಸಲ್ಮಾನ್ ಖಾನ್ ನಿವಾಸದ ಮೇಲೆ ಫೈ*ರಿಂಗ್ ನಡೆಸಿದ್ದ ಇಬ್ಬರು ಅರೆಸ್ಟ್..!