ರಾಯಚೂರು : ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಘಟನೆ ರಾಯಚೂರಿನ ಸಿರವಾರದಲ್ಲಿ ನಡೆದಿದೆ. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಹತ್ತಿರದ ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಿಗಿನ ಜಾವ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಬೆಳಿಗ್ಗೆ ಇದನ್ನು ಗಮನಿಸಿದ ಯುವಕರು ತಮ್ಮ ಸಮುದಾಯದವರಿಗೆ ಸುದ್ದಿ ತಲುಪಿಸಿದ್ದಾರೆ. ಇದರಿಂದ ಭಾರಿ ಸಂಖ್ಯೆಯಲ್ಲಿ ಸೇರಿದ ಜನ ಮುಖ್ಯರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.
ಲಿಂಗಸೂಗುರು ಮುಖ್ಯ ರಸ್ತೆ ಬಂದ್ ಮಾಡಿ, ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋಮು ಸೌಹಾರ್ದತೆಯನ್ನು ಕದಡುತ್ತಿರುವ ಕಿಡಿಗೇಡಿಗಳನ್ನು ಪತ್ತೆ ಮಾಡಿ ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು. ಸ್ಥಳಕ್ಕೆ ಬಂದ ಪೊಲೀಸರು, ರಸ್ತೆ ಮಧ್ಯೆ ಪ್ರತಿಭಟನೆ ಮಾಡಿದರೆ ಸಂಚಾರಕ್ಕೆ ತೊಂದರೆಯಾಗಲಿದೆ ತನಿಖೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವ ಭರವಸೆ ನೀಡಿದರು. ಕಿಡಿಗೇಡಿಗಳನ್ನು ಬಂಧಿಸುವ ವರೆಗೂ ಪ್ರತಿಭಟನೆ ನಿಲ್ಲದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದು ವೇಳೆ ಆರೋಪಿಯನ್ನ ಬಂಧಿಸಿದಿದ್ದರೆ ನಾಳೆಯಿಂದ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನು ಶಾಸಕರುಗಳು ನೀಡಿದ್ದಾರೆ. ಕಿಡಿಗೇಡಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನಿಡಿದ್ದಾರೆ. ಶಾಸಕ ಹಂಪಯ್ಯ ನಾಯಕ ಬಳಿಕ ಟಿಪ್ಪು ನಾಮ ಫಲಕಕ್ಕೆ ಹೂವಿನ ಹಾರ ಹಾಕಿದ್ದಾರೆ. ನಂತರ ಪ್ರತಿಭಟನೆ ನಿರತರು ಶಾಸಕರ ಮಾತಿಗೆ ಸ್ಪಂದಿಸಿ ಪ್ರತಿಭಟನೆ ವಾಪಸ್ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ : ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭ – ನಾಳೆ ಮಧ್ಯಂತರ ಬಜೆಟ್ ಮಂಡನೆ..!