Download Our App

Follow us

Home » ಮೆಟ್ರೋ » ಸಿಲಿಕಾನ್​ ಸಿಟಿಯಲ್ಲಿ ಧಾರಾಕಾರ ಮಳೆ – ನಾಳೆ ಶಾಲೆಗಳಿಗೆ ರಜೆ ಘೋಷಣೆ..!

ಸಿಲಿಕಾನ್​ ಸಿಟಿಯಲ್ಲಿ ಧಾರಾಕಾರ ಮಳೆ – ನಾಳೆ ಶಾಲೆಗಳಿಗೆ ರಜೆ ಘೋಷಣೆ..!

ಬೆಂಗಳೂರು : ಕಳೆದ ನಾಲ್ಕೈದು ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಹಲವು ಏರಿಯಾಗಳಲ್ಲಿ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಸತತ ಮಳೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಾಳೆ(ಅಕ್ಟೋಬರ್ 23) ಶಾಲೆಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಜಗದೀಶ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಲ್ಲಿ ನಾಳೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಕೂಡ ಘೋಷಿಸಿದೆ. ಇದರ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಂಗಳೂರು ನಗರದ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಆದರೆ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರ್‌ಗಳಿಗೆ ರಜೆ ಇರುವುದಿಲ್ಲ ಎಂದು ಡಿಸಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಬಿಗ್​ಬಾಸ್​ ಮನೆಗೆ ನನ್ನ ಕಿಡ್ನಾಪ್​ ಮಾಡಿ ಕರ್ಕೊಂಡು ಹೋದ್ರು.. ಜಗದೀಶ್​​​ ಹಿಂಗ್ಯಾಕಂದ್ರು?

Leave a Comment

DG Ad

RELATED LATEST NEWS

Top Headlines

BWSSB ನಿರ್ಲಕ್ಷ್ಯಕ್ಕೆ ನಿವಾಸಿಗಳ ಪರದಾಟ – ಜಲಮಂಡಳಿ ಬೇಜವಾಬ್ದಾರಿತನಕ್ಕೆ ಸ್ಥಳೀಯರ ಆಕ್ರೋಶ..!

ಬೆಂಗಳೂರು : ಕಾವೇರಿ ಪೈಪ್ ಲೈನ್ ಒಡೆದು ಮನೆಯೊಳಗೆ ನುಗ್ಗಿದ ನೀರು ಘಟನೆ ಬನಶಂಕರಿ 5ನೇ ಅಂತ ವಸಂತಪುರದಲ್ಲಿ ನಡೆದಿದೆ. BWSSB ನಿರ್ಲಕ್ಷ್ಯದಿಂದ ನಿವಾಸಿಗಳು ಪರದಾಡುವಂತಹ ಸ್ಥಿತಿ

Live Cricket

Add Your Heading Text Here