ಬಾಗಲಕೋಟೆ : ಮಹಾರಾಷ್ಟ್ರ ಭಾಗದಲ್ಲಿ ಅಬ್ಬರಿಸುತ್ತಿರುವ ರಣಭೀಕರ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಅವಾಂತರ ಸೃಷ್ಟಿಯಾಗಿದೆ. ನದಿಗಳೆಲ್ಲವೂ ಬೋರ್ಗರೆಯುತ್ತಿದ್ದು, ಕೆಲ ಸೇತುವೆಗಳು ಮುಳುಗಿವೆ. ಗ್ರಾಮಗಳು ಜಲಾವೃತವಾಗುವ ಸನಿಹಕ್ಕೆ ಬಂದಿದೆ.
ಬಾಗಲಕೋಟೆ ಜಿಲ್ಲೆಯ ಹಲವೆಡೆ ಪ್ರವಾಹ ಭೀತಿ ಎದುರಾಗಿದ್ದು, ಮುಧೋಳ ತಾಲ್ಲೂಕಿನ ಮೂರು ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ರಬಕವಿ-ಬನಹಟ್ಟಿ ತಾಲ್ಲೂಕಿನ ಗ್ರಾಮಗಳಲ್ಲಿ ರಣಮಳೆಯಿಂದ ಪ್ರವಾಹದ ಭೀತಿ ಸೃಸ್ಟಿಯಾಗಿದೆ. ಈಗಾಗಲೇ ಕೆಲವು ಗ್ರಾಮಗಳ ಸಂಪರ್ಕ ಕಲ್ಪಿಸುವ ರಸ್ತೆಗಳು ಕೂಡ ಜಲಾವೃತವಾಗಿದ್ದು, ನದಿ ದಂಡೆಯ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಬೆಳಗಾವಿ ಭಾಗದಲ್ಲೂ ಮಳೆಯ ಅಬ್ಬರ ಮುಂದುವರೆದಿದ್ದು, ಹಿಡಕಲ್ ಜಲಾಶಯಕ್ಕೆ ಭಾರೀ ನೀರು ಹರಿದು ಬರ್ತಿದೆ. ಘಟಪ್ರಭಾ ನದಿಗೆ 60 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಪ್ರವಾಹ ಬರುವ ಸೂಚನೆಯಿರುವ ಗ್ರಾಮಗಳಿಗೆ ಡಂಗೂರ ಮೂಲಕ ಎಚ್ಚರಿಕೆ ನೀಡಲಾಗಿದ್ದು, ಕಾಳಜಿ ಕೇಂದ್ರಗಳಿಗೆ ದನಕರುಗಳ ಜೊತೆಗೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ : ಪತಿ ದರ್ಶನ್‌ಗಾಗಿ ಕೊಲ್ಲೂರು ಮೂಕಾಂಬಿಕೆಯ ಮೊರೆ ಹೋದ ವಿಜಯಲಕ್ಷ್ಮಿ..!