ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ಪ್ರಾಸಿಕ್ಯೂಷನ್ ಅರ್ಜಿಗಳಿಗೆ ಅನುಮತಿ ನೀಡುವಂತೆ ಆಗ್ರಹಿಸಿ ಇಂದು ಸಿಎಂ, ಡಿಸಿಎಂ ನೇತೃತ್ವದಲ್ಲಿ ರಾಜಭವನ ಚಲೋ ನಡೆಯಲಿದೆ.
ರಾಜ್ಯಪಾಲರು ಪಕ್ಷಪಾತಿ ಧೋರಣೆ ತೋರಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಸಿಎಂ ಸಿದ್ದು ವಿರುದ್ಧ ಪ್ರಾಸಿಕ್ಯೂಷನ್ ಪುನರ್ ಪರಿಶೀಲನೆಗೆ ಪಟ್ಟು ಹಿಡಿದಿದ್ದಾರೆ. ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಿಂದ ರಾಜಭವನದವರೆಗೆ ಕಾಲ್ನಡಿಗೆ ಮೂಲಕ ಪ್ರತಿಭಟನಾ ರ್ಯಾಲಿ ನಡೆಸಲಿರುವ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಮಾಜಿ ರಾಜ್ಯಪಾಲರನ್ನು ಭೇಟಿ ಮಾಡಿ, ಪ್ರತಿಪಕ್ಷಗಳ ನಾಯಕರಮೇಲಿನ ಪ್ರಾಸಿಕ್ಯೂಷನ್ ಅರ್ಜಿಗಳಿಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸದ್ದಾರೆ.
ಎಚ್.ಡಿ.ಕುಮಾರಸ್ವಾಮಿ, ಸಚಿವರಾದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಹಾಗೂ ಜನಾರ್ದನರೆಡ್ಡಿ ವಿರುದ್ದ ತನಿಖೆಗೆ ಆಗ್ರಹಸಲಿದ್ದಾರೆ. ಈ ವೇಳೆ ಕಾಂಗ್ರೆಸ್ ಸಚಿವರು, ಶಾಸಕರು, ಸಂಸದರು, ರಾಜ್ಯಸಭೆ ಸದಸ್ಯರು, MLCಗಳು, ಕೆಪಿಸಿಸಿ ಪದಾಧಿಕಾರಿಗಳು ಸೇರಿ ಹಲವು ಮುಖಂಡರು ಸಾಥ್ ನೀಡಲಿದ್ದಾರೆ.
ಇದನ್ನೂ ಓದಿ : ಅಶ್ವಿನಿ ಪುನೀತ್ಗೆ ಬಾಳು ಕೊಡಲು ನಿರ್ಧರಿಸಿದ್ದೇನೆ – ಡೀಪ್‌ಫೇಕ್ ವಿಡಿಯೋ ಹಂಚಿಕೊಂಡ ಕಿಡಿಗೇಡಿ ವಿರುದ್ಧ ನೆಟ್ಟಿಗರ ಆಕ್ರೋಶ..!