Download Our App

Follow us

Home » ರಾಜಕೀಯ » ನಾನೂ ರಾಮಮಂದಿರಕ್ಕೆ ಹೋಗ್ತೇನೆ.. ಆದ್ರೆ ಜ.22ಕ್ಕೆ ಹೋಗಲ್ಲ, ಪುರುಸೊತ್ತು ಸಿಕ್ದಾಗ ಹೋಗ್ತೇನೆ : ಸಿಎಂ ಸಿದ್ದರಾಮಯ್ಯ..!

ನಾನೂ ರಾಮಮಂದಿರಕ್ಕೆ ಹೋಗ್ತೇನೆ.. ಆದ್ರೆ ಜ.22ಕ್ಕೆ ಹೋಗಲ್ಲ, ಪುರುಸೊತ್ತು ಸಿಕ್ದಾಗ ಹೋಗ್ತೇನೆ : ಸಿಎಂ ಸಿದ್ದರಾಮಯ್ಯ..!

ಶಿವಮೊಗ್ಗ : ನಾನೂ ರಾಮಮಂದಿರಕ್ಕೆ ಹೋಗುತ್ತೇನೆ. ಆದ್ರೆ ಜನವರಿ 22ರಂದು ಅಯೋಧ್ಯೆಗೆ ಹೋಗಲ್ಲ, ಮುಂದೆ ಯಾವಾಗ್ಲಾದ್ರೂ ಹೋಗ್ತೇನೆ’ ಎಂದು ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪುರುಸೊತ್ತು ಸಿಕ್ದಾಗ ಅಯೋಧ್ಯೆಗೆ ಹೋಗುತ್ತೇನೆ. ಜನವರಿ 22ರಂದು ನಾವು ಶ್ರೀರಾಮನ ಪೂಜೆ ಮಾಡ್ತೇವೆ. ರಾಜ್ಯದಲ್ಲಿರುವ ರಾಮಮಂದಿರಗಳಿಗೆ ಹೋಗಿ ಪೂಜೆ ಮಾಡ್ತೇವೆ. ನಮ್ಮ ಕಾರ್ಯಕರ್ತರು ಶ್ರೀರಾಮನ ದೇಗುಲಗಳಲ್ಲಿ ಪೂಜೆ ಮಾಡ್ತಾರೆ. ರಾಜಕೀಯಕ್ಕೆ ರಾಮಮಂದಿರವನ್ನು ನಾವು ಬಳಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಯೋಧ್ಯೆ ಕಾರ್ಯಕ್ರಮದಿಂದ ದೂರ ಉಳಿದ ಹೈಕಮಾಂಡ್​ : ಇದೇ ತಿಂಗಳು ಜನವರಿ 22ರಂದು ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರುತ್ತದೆ. ಈ ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ್​ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್​ ಚೌಧರಿ ಅವರಿಗೆ ಆಹ್ವಾನ ಬಂದಿತ್ತು. ಆದರೆ ಕಾಂಗ್ರೆಸ್​​ ಈ ಕಾರ್ಯಕ್ರಮದಲ್ಲಿ ಭಾಗಿಯಾಗದಿರಲು ನಿರ್ಧರಿಸಿದೆ.

ಹೈಕಮಾಂಡ್​ ನಿರ್ಧಾರಕ್ಕೆ ಸಿದ್ದರಾಮಯ್ಯ ಬೆಂಬಲ : ವರಿಷ್ಠರ ನಿರ್ಧರಕ್ಕೆ ಬೆಂಬಲ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ರಂದು ಟ್ವೀಟ್​ ಮಾಡಿದ್ದರು. ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ರಂಜನ್ ಚೌದರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ.

ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ.

ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ ಎಂದು ಗುಡುಗಿದ್ದರು.

ಇದನ್ನೂ ಓದಿ : ಜನಾರ್ದನ ರೆಡ್ಡಿ BJPಗೆ ಬಂದರೆ ಅಭ್ಯಂತರವಿಲ್ಲ; ಶ್ರೀರಾಮುಲು

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here