Download Our App

Follow us

Home » ಸಿನಿಮಾ » ರಿಷಿ ನಟನೆಯ “ರಾಮನ ಅವತಾರ” ಚಿತ್ರದ ಟ್ರೈಲರ್ ಔಟ್ – ಮೇ 10ಕ್ಕೆ ಸಿನಿಮಾ ರಿಲೀಸ್..!

ರಿಷಿ ನಟನೆಯ “ರಾಮನ ಅವತಾರ” ಚಿತ್ರದ ಟ್ರೈಲರ್ ಔಟ್ – ಮೇ 10ಕ್ಕೆ ಸಿನಿಮಾ ರಿಲೀಸ್..!

ಟೀಸರ್, ಹಾಡು ಹಾಗೂ ವಿಭಿನ್ನ ಪ್ರಮೋಷನ್ ವಿಡಿಯೋಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ರಾಮನ ಅವತಾರ. ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ರಾಮನ ಅವತಾರ ಸಿನಿಮಾದ ಮೊದಲ ನೋಟ ಅನಾವರಣ ಮಾಡಲಾಯಿತು. ರಾಮನ‌ ಅವತಾರ ಟ್ರೇಲರ್ ಪ್ರಾಮಿಸಿಂಗ್ ಆಗಿದ್ದು, ಟ್ರೇಲರ್ ನಲ್ಲಿ ನಗು, ಅಳು, ಪ್ರೀತಿ-ಪ್ರೇಮ ಎಲ್ಲವೂ ಇದೆ. ಭಿನ್ನ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿರುವ ರಿಷಿ, ಇತ್ತೀಚಿಗೆ ವೆಬ್​ ಸೀರಿಸ್ ಮೂಲಕವೂ ಮೋಡಿ ಮಾಡಿರುವ ಅವರೀಗ ಕಾಮಿಡಿ ಕಥೆ ಹೊತ್ತು ನಿಮ್ಮನ್ನು ನಗಿಸಲು ಬರ್ತಿದ್ದಾರೆ.

‘ರಾಮನ ಅವತಾರ’ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದಾರೆ. ನಟ ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ರಾಮನ ಅವತಾರ’ ಸಿನಿಮಾಗೆ ವಿಕಾಸ್ ಪಂಪಾಪತಿ ನಿರ್ದೇಶನ ಮಾಡಿದ್ದಾರೆ. ನಿರ್ದೇಶನದಲ್ಲಿ ಇದು ಅವರ ಮೊದಲ ಅನುಭವ.

‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಅವರು ‘ಸ್ಟಾರ್ ಫ್ಯಾಬ್ ಪ್ರೊಡಕ್ಷನ್’​ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್‌ ಅಡಿಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶಪಾಂಡೇ ಛಾಯಾಗ್ರಾಹಣ ಮಾಡಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಅಮರನಾಥ್ ಸಂಕಲನ ಚಿತ್ರಕ್ಕಿದೆ. ಮೇ 10ಕ್ಕೆ ರಾಮನ ಅವತಾರ ರಾಜ್ಯಾದ್ಯಂತ ತೆರೆಗೆ ಬರ್ತಿದೆ.

ರಾಮನ ಅವತಾರ ಸಿನಿಮಾದ ಮೊದಲ ನೋಟ ಅನಾವರಣದ ಸಂದರ್ಭದಲ್ಲಿ ಚಿತ್ರತಂಡ ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದೆ. ನಟ ರಿಷಿ ಸಿನಿಮಾದ ಬಗ್ಗೆ ಮಾತನಾಡಿ, “ಈ ಸಿನಿಮಾ ಒಪ್ಪಿಕೊಳ್ಳಲು ಮುಖ್ಯ ಕಾರಣ ಆಪರೇಷನ್ ಅಲಮೇಲಮ್ಮ. ಈ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಆ ರೀತಿ ಎಂಟರ್ ಟೈನ್ಮೆಂಟ್ ಸಿನಿಮಾ ಮಾಡಿ ಎನ್ನುತ್ತಿದ್ದರು. ಅದೇ ರೀತಿ ಹಾಸ್ಯಭರತಿ ಚಿತ್ರ ಮಾಡಿ ಎನ್ನುತ್ತಿದ್ದರು. ನನಗೆ ಆಪರೇಷನ್ ಅಲಮೇಲಮ್ಮ ಮ್ಯಾಜಿಕ್. ಅದನ್ನು ರಿಪೀಟ್ ಮಾಡುವ ಆಗಿಲ್ಲ. ನೋಡೋಣಾ ಅದು ಸರಳ ಜಾನರ್ ಅಲ್ಲ. ಆ ಸಮಯದಲ್ಲಿ ಪಂಪಾಪತಿ ಸಿಕ್ಕಿದ್ದರು. ಅವರ ಹಾಸ್ಯ ನನಗೆ ಇಷ್ಟವಾಯ್ತು. ರಾಮಾಯಣ ಇಟ್ಟುಕೊಂಡು ಸಿನಿಮಾ ಮಾಡುವ ಕಥೆ ತಂದರು. 2024 ರಲ್ಲಿ ನಡೆಯುವ ಘಟನೆಗೆ ರಾಮಾಯಣ ಮೌಲ್ಯವನ್ನು ತೋರಿಸುವುದು. ಈ ಚಿತ್ರದಲ್ಲಿ ತೋರಿಸುತ್ತಿರುವುದು ನನಗೆ ಖುಷಿ ಕೊಟ್ಟಿದೆ. ಇದು ಖುಷಿ ಕೊಡುವ ಸಿನಿಮಾ. ಪ್ರತಿಯೊಬ್ಬರು ತಮ್ಮ ಪಾತ್ರಗಳಿಗೆ ಅದ್ಭುತವಾಗಿ ಜೀವ ತುಂಬಿದ್ದಾರೆ. ಸಿನಿಮಾ ಮೇ‌10ರಂದು ರಿಲೀಸ್ ಆಗ್ತಿದೆ. ಹಾಡುಗಳು ನನಗೆ ತುಂಬಾ ಇಷ್ಟ. ಇಡೀ ಸಿನಿಮಾಗೆ ದುಡಿದ ಎಲ್ಲರಿಗೂ ಧನ್ಯವಾದ ತಿಳಿಸಿದರು.

ಬಳಿಕ ನಿರ್ದೇಶಕ ವಿಕಾಸ್ ಪಂಪಾಪತಿ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಿನಿಮಾ ಕ್ಯಾರೆಕ್ಟರ್ ಜರ್ನಿ ಹೇಳುತ್ತಿದ್ದೇವೆ. ರಾಮ ಪಾತ್ರಧಾರಿ ಅವನಿಗೆ ಅವನೇ ಜೆಂಟಲ್ ಮ್ಯಾನ್ ಎಂದು ಹೇಳಿಕೊಂಡು ಓಡಾಡುತ್ತಾ ಇರುತ್ತಾನೆ. ಅವನು ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ? ಅವನ ಜೀವನದಲ್ಲಿ ನಡೆದ ಘಟನೆಗಳೇನು ಅವನನ್ನು ಹೇಗೆ ಬದಲಾಯಿಸುತ್ತದೆ? ರಾಮನ ಅವತಾರ ಎಂದು ಯಾಕೆ ಇಟ್ಟಿದ್ದೇವೆ ಎಂದರೆ? ರಾಮನ ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ ಅನ್ನುವುದನ್ನು ಎಂಟರ್ ಟೈನ್ಮೆಂಟ್ ಆಗಿ ಹೇಳಿದ್ದೇವೆ. ರಾಮನ ಅವತಾರ ಎಂದು ಹೇಗೆ ಹೆಸರಟ್ಟಿದ್ದೇವೆ ಎಂದರೆ ಎಲ್ಲರ ಲೈಫ್ ನಲ್ಲಿಯೂ ಒಂದಲ್ಲ ಒಂದು ರಾಮಾಯಣ ನಡೆಯುತ್ತದೆ. ಸೀತೆ ತರ ಹೆಂಡತಿ, ಲಕ್ಷ್ಮಣ ರೀತಿ ತಮ್ಮ, ರಾವಣನಿಂದ ಆಗುವ ಸಮಸ್ಯೆ? ಈ ರೀತಿ ಸಮಸ್ಯೆಗಳು ಎಲ್ಲರ ಜೀವನದಲ್ಲಿ ನಡೆಯುತ್ತವೆ. ಆ ಘಟನೆಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ ಎಂದು ಹೇಳಿದರು.

ನಟಿ ಪ್ರಣೀತಾ ಸುಭಾಷ್ ಮಾತನಾಡಿ, ರಾಮನ ಅವತಾರ ತುಂಬಾ ವಿಶೇಷವಾದ ಸಿನಿಮಾ. ರಾಮಾಯಣ ಎಲ್ಲರಿಗೂ ಗೊತ್ತಿದೆ. ಈ ರಾಮಾಯಣ ಮಾರ್ಡನ್ ಟೇಕ್. ನಾನು ಈ ರೀತಿ ಪ್ರಾಜೆಕ್ಟ್ ಭಾಗವಾಗಿದ್ದು, ಖುಷಿ ಕೊಟ್ಟಿದೆ. ರಾಮಾಯಣ ಬಗ್ಗೆ ಅಂದ ತಕ್ಷಣ ಸಿನಿಮಾ ಒಪ್ಪಿಕೊಂಡೆ. ರಿಷಿ ಬೇರೆ ಅವರ ಚಿತ್ರಗಳನ್ನು ನೋಡಿದ್ದೇನೆ. ಶೂಟಿಂಗ್ ಜರ್ನಿ ತುಂಬಾ ಚೆನ್ನಾಗಿತ್ತು ಎಂದು ಹೇಳಿದರು.

ನಟಿ ಶುಭ್ರ ಅಯ್ಯಪ್ಪ ಮಾತನಾಡಿ, ನಿರ್ದೇಶಕರು ನನ್ನ ಪಾತ್ರದ ಹೇಳಿದಾಗ ನಾನು ಎಕ್ಸೈಟ್ ಆದೆ. ಹಳ್ಳಿ ಹುಡುಗಿ ಪಾತ್ರದಲ್ಲಿ ನನ್ನನ್ನು ನಾನು ನೋಡಲು ಕಾತುರನಾಗಿದ್ದೇನೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಮೇ 10ಕ್ಕೆ‌ ನಮ್ಮ ಸಿನಿಮಾ ರಿಲೀಸ್ ಆಗುತ್ತಿದೆ. ನಿಮ್ಮ ಬೆಂಬಲ ಇರಲಿ ಎಂದರು.

ಇದನ್ನೂ ಓದಿ : ಬಿಜೆಪಿ ಹಿರಿಯ ನಾಯಕ, ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ..!

Leave a Comment

DG Ad

RELATED LATEST NEWS

Top Headlines

‘ಡ್ರ್ಯಾಗನ್​ ರಾಷ್ಟ್ರ’ದಲ್ಲಿ ಮತ್ತೆ ಮಹಾಮಾರಿ ‘ಕೊರೋನಾ’ ಸ್ಫೋಟ – ಜಗತ್ತಿಗೆ ಶುರುವಾಯ್ತು ಆತಂಕ!

ಕೊರೋನಾ ಎನ್ನುವ ಮಹಾಮಾರಿಯ ಹೊಡೆತದಿಂದ ಜಗತ್ತು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಲಕ್ಷಾಂತರ ಮಂದಿ ಜೀವ ತೆಗೆದ, ಸಾವಿರಾರು ಕುಟುಂಬಗಳನ್ನು ಬೀದಿಪಾಲು ಮಾಡಿದ ಮಾರಕ ವೈರಸ್‌ ನೆನಪಿಸಿಕೊಂಡರೆ ಜಗತ್ತು

Live Cricket

Add Your Heading Text Here