Download Our App

Follow us

Home » ಜಿಲ್ಲೆ » ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ – ಸಿಎಂ ಸಿದ್ದು ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ..!

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ – ಸಿಎಂ ಸಿದ್ದು ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ..!

ಬೆಂಗಳೂರು : ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್ ಮತ್ತು ಶಾಸಕರು ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ಸಲ್ಲಿಸಿದ್ದರು.

ಇದೀಗ ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಸಿಎಂ ಸಿದ್ದು ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ರಾಮನಗರ ಜಿಲ್ಲೆ ಬದಲಾವಣೆಯ ಬಗ್ಗೆ ಸಚಿವ ಹೆಚ್​.ಕೆ.ಪಾಟೀಲ್​ ಮಾಹಿತಿ ನೀಡಿದ್ದಾರೆ. ಈ ಮೂಲಕ ಡಿಸಿಎಂ ಡಿಕೆಶಿ ಪ್ರಯತ್ನದ ಫಲವಾಗಿ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಹೆಸರು ಬದಲಾವಣೆಯಾಗೆ ಒಪ್ಪಿಗೆ ಸಿಕ್ಕಿದೆ.

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಹೆಸರು ಬದಲಾವಣೆಯಾಗಲಿದ್ದು, ಐದು ತಾಲೂಕುಗಳನ್ನು ಒಳಗೊಂಡ ಅಂದರೆ ರಾಮನಗರ, ಕನಕಪುರ, ಚನ್ನಪಟ್ಟಣ, ಮಾಗಡಿ, ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ರಚನೆಯಾಗಲಿದೆ.

ಇದನ್ನೂ ಓದಿ : ಒಂದಲ್ಲಾ..ಎರಡಲ್ಲಾ HDK 21,000 ಚದರಡಿ ಮೂಡ ಜಾಗ ಪಡೆದಿದ್ದಾರೆ – ಸಚಿವ ಭೈರತಿ ಸುರೇಶ್..!  

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here