ಬೆಂಗಳೂರು : ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ಇನ್ನು ರಾಜಣ್ಣ ಯಾವ ಲೆಕ್ಕ? ಎಂದು ಸಚಿವ ರಾಜಣ್ಣ ಅವರಿಗೆ ಬಿಜೆಪಿ ತಿರುಗೇಟು ನೀಡಿದೆ.
ʻಒಂದು ಟೆಂಟ್‌ನಲ್ಲಿ ಎರಡು ಗೊಂಬೆ ಇಟ್ಟು ಇದೇ ಶ್ರೀರಾಮ ಅಂತ ಹೇಳ್ತಿದ್ರುʼ ಎಂಬ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣ ಖಾತೆ X ಮೂಲಕ ಪ್ರತಿಕ್ರಿಯಿಸಿದ ಬಿಜೆಪಿ, ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ? ಎಂದು ಬಿಜೆಪಿ ಪ್ರಶ್ನಿಸಿ ಆಕ್ರೋಶ ಹೊರಹಾಕಿದೆ.
ಶತ ಶತಮಾನಗಳ ಕೋಟ್ಯಂತರ ರಾಮಭಕ್ತರ ಹೋರಾಟ, ಸಹಸ್ರಾರು ಕರಸೇವಕರ ಬಲಿದಾನಗಳಿಂದ ಭವ್ಯ ರಾಮಮಂದಿರದಲ್ಲಿ ಬಾಲರಾಮ ನೆಲೆಸುತ್ತಿರುವ ಸಮಯದಲ್ಲಿ, ಶ್ರೀರಾಮ ಸೀತೆಯರನ್ನು ಗೊಂಬೆಗೆ ಹೋಲಿಸುತ್ತಿರುವ ಸಹಕಾರ ಸಚಿವ ರಾಜಣ್ಣರವರೇ, ನಾಡಿನ ಜನರಷ್ಟೇ ಅಲ್ಲ, ನಿಮ್ಮನ್ನು ಕಾಂಗ್ರೆಸ್ ಕಾರ್ಯಕರ್ತರೂ ಕ್ಷಮಿಸಲಾರರು ಎಂದು ಅಸಮಾಧಾನ ಹೊರಹಾಕಿದೆ.
ಸಚಿವ ರಾಜಣ್ಣ ಮಾಡಿದ ಟೀಕೆ ಏನು? ತುಮಕೂರಿನಲ್ಲಿ ಮಂಗಳವಾರ ನಡೆದ ಹಿಂದುಳಿದ ವರ್ಗಗಳ ಒಕ್ಕೂಟ ಸಮಾವೇಶದಲ್ಲಿ ಮಾತನಾಡಿದ ಸಚಿವ ರಾಜಣ್ಣ, ನಾನು ಬಾಬ್ರಿ ಮಸೀದಿ ಬೀಳಿಸಿದ್ದಾಗ ಅಲ್ಲಿಗೆ ಹೋಗಿದ್ದೆ. ಒಂದು ಟೆಂಟ್ ಅಲ್ಲಿ ಎರಡು ಗೊಂಬೆ ಇಟ್ಟು ಇದೇ ಶ್ರೀರಾಮ ಅಂತಾ ಹೇಳ್ತಿದ್ರು. ಟೂರಿಂಗ್ ಟಾಕೀಸ್ ಅಲ್ಲಿ ಗೊಂಬೆ ಇಟ್ಟಿದ್ದಾರೆ ಅನಿಸ್ತು.
ನಮ್ಮೂರಲ್ಲಿ ನೂರಾರು ವರ್ಷ ಇತಿಹಾಸ ಇರುವಂತಹ, ಪಾವಿತ್ರ‍್ಯವಾಗಿರುವ ಶ್ರೀರಾಮನ ದೇವಸ್ಥಾನಗಳಿವೆ. ಈಗ ಅದನ್ನ ಬಿಟ್ಟು ಇವರು ಚುನಾವಣೆಗೋಸ್ಕರ ದೇವಸ್ಥಾನಗಳನ್ನ ಕಟ್ಟಿ, ಜನರಿಗೆ ಮೋಸ ಮಾಡೋ ಕೆಲಸ ಮಾಡ್ತಿದ್ದಾರೆ ಎಂದು ಬಿಜೆಪಿಗರಿಗೆ ಸಚಿವ ರಾಜಣ್ಣ ಟೀಕಿಸಿದ್ದರು.
ಇದನ್ನೂ ಓದಿ : ಪೀಣ್ಯ ಫ್ಲೈಓವರ್ ಮೇಲೆ 30 ಟನ್ ತೂಕದ ಟ್ರಕ್ ಗಳನ್ನ ನಿಲ್ಲಿಸಿ ಲೋಡ್ ಟೆಸ್ಟಿಂಗ್.. – BTV Kannada