Download Our App

Follow us

Home » ಮೆಟ್ರೋ » ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದ NIA..!

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದ NIA..!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (NIA)  ವಶಕ್ಕೆ ಪಡೆದುಕೊಂಡಿದೆ. ಸದ್ಯ ವಶಕ್ಕೆ ಪಡೆಯಲಾಗಿರುವ ಇಬ್ಬರನ್ನು NIA ತೀವ್ರ ವಿಚಾರಣೆಗೊಳಪಡಿಸಿದೆ. ಘಟನೆ ಸಂಬಂಧ ಎನ್​ಐಎ ಮತ್ತೆ ದಾಳಿ ಹಾಗೂ ಶೋಧ ಕಾರ್ಯ ಮುಂದುವರಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜ್ಯದ ಹಲವೆಡೆ ಎನ್‌ಐಎ ಕಾರ್ಯಾಚರಣೆ ಕೈಗೊಂಡಿತ್ತು.

ಕೆಫೆ ಸ್ಪೋಟ ಹಾಗೂ ಹಳೇ ಪ್ರಕರಣಗಳ ನಡುವೆ ಸಾಮ್ಯತೆ ಹಿನ್ನೆಲೆ, ಹಳೇ ಪ್ರಕರಣಗಳಲ್ಲಿ ಭಾಗಿಯಾದ ಹಲವರ ಮೇಲೆ NIA ನಿಗಾ ಇರಿಸಿದೆ. ಈಗಾಗಲೇ ಜೈಲಿನಲ್ಲಿರುವ ಹಲವರ ವಿಚಾರಣೆ ನಡೆಸಿದ್ದ NIA, ತಲೆಮರೆಸಿಕೊಂಡಿರುವ ಕೆಲವರ ಮೇಲೂ ಎನ್​ಐಎ ನಿಗಾ ಇಟ್ಟಿದೆ. ಶಂಕಿತರಿಗೆ ಪ್ರತ್ಯಕ್ಷ-ಪರೋಕ್ಷವಾಗಿ ನೆರವು ನೀಡಿದವರ ಮೇಲೆ ಕಣ್ಣಿಟ್ಟಿದೆ. ಅಂಥವರನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸುತ್ತಿದೆ.

ಅನುಮಾನಸ್ಪದ ವ್ಯಕ್ತಿಗಳಿಂದ ಸ್ಫೋಟ ನಡೆಸಿದವರ ಬಗ್ಗೆ ಸುಳಿವು ಸಿಗುವ ಸಾಧ್ಯತೆ ಇದೆ. ತಾಂತ್ರಿಕವಾಗಿ ಅಥವಾ ಮೌಖಿಕವಾಗಿ ಮಾಹಿತಿ ಲಭ್ಯವಾಗಬಹುದು. ಆದ್ದರಿಂದ ಸಂಶಯಾಸ್ಪದ ವ್ಯಕ್ತಿಗಳನ್ನ ವಶಕ್ಕೆ ಪಡೆದು ಎನ್‌ಐಎ ವಿಚಾರಣೆ ನಡೆಸುತ್ತಿದೆ. ಆ ಮೂಲಕ ಸ್ಫೋಟ ನಡೆಸಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ ಬಲೆ‌ ಬೀಸಿದೆ. ಮೊಬೈಲ್ ಕರೆಗಳು, ವಾಟ್ಸಪ್ ಚಾಟಿಂಗ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈ ಮೂಲಕ ಬಾಂಬ್ ಸ್ಫೋಟ ಮಾಡಿದ ಆರೋಪಿಗಳ ಪತ್ತೆಗೆ ಎನ್ಐಎ ಬಲೆ ಬೀಸಿದೆ.

ಇದನ್ನೂ ಓದಿ : ಲೋಕಸಭೆ ಎಲೆಕ್ಷನ್​​​​​ ನೀತಿ ಸಂಹಿತೆ ಎಫೆಕ್ಟ್​ – ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್​​​​​ ಎಲೆಕ್ಷನ್​​ ಮುಂದೂಡಿಕೆ..! vb

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here