Download Our App

Follow us

Home » ಫ್ಲ್ಯಾಶ್ ನ್ಯೂಸ್ » ಮಾಧ್ಯಮ ಲೋಕದ ಭೀಷ್ಮ, ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕರಾದ ರಾಮೋಜಿ ರಾವ್ ಇನ್ನಿಲ್ಲ..!

ಮಾಧ್ಯಮ ಲೋಕದ ಭೀಷ್ಮ, ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕರಾದ ರಾಮೋಜಿ ರಾವ್ ಇನ್ನಿಲ್ಲ..!

ಮಾಧ್ಯಮ ಲೋಕದ ಭೀಷ್ಮ ಎಂದೇ ಖ್ಯಾತರಾಗಿದ್ದ ರಾಮೋಜಿ ಗ್ರೂಪ್ಸ್‌ ಸಂಸ್ಥಾಪಕರಾದ ರಾಮೋಜಿ ರಾವ್ ಅವರು ಇಹಲೋಕ ತ್ಯಜಿಸಿದ್ದಾರೆ. (ಜೂನ್ 8) ಇಂದು ಬೆಳಗ್ಗೆ 4.50ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ.

ಸದ್ಯ ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇರುವ ಅವರ ಮನೆಗೆ ರವಾನೆ ಮಾಡಲಾಗಿದೆ. ರಾಮೋಜಿ ರಾವ್ ಅವರ ನಿವಾಸದಲ್ಲೇ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ರಾಮೋಜಿ ರಾವ್ ಅವರ ನಿವಾಸದಲ್ಲೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.

ರಾಮೋಜಿ ರಾವ್ ಅವರಿಗೆ 87 ವರ್ಷ ವಯಸ್ಸಾಗಿತ್ತು. ರಾಮೋಜಿ ರಾವ್ ಅವರನ್ನು ಜೂನ್ 5 ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೈದರಾಬಾದ್‌ನ ನಾನಾಕರಮ್‌ಗುಡದಲ್ಲಿ ಇರುವ ಸ್ಟಾರ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ವಯೋ ಸಹಜ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

ಹಲವು ಸಂಸ್ಥೆಗಳ ಸ್ಥಾಪನೆ.. ಎಲ್ಲದರಲ್ಲೂ ಯಶಸ್ಸು : ರಾಮೋಜಿ ರಾವ್ ಅವರು ಕೈಗೊಂಡ ಪ್ರತಿಯೊಂದು ಯೋಜನೆಯೂ ಇಂದು ಇತಿಹಾಸ ನಿರ್ಮಿಸಿವೆ. ಮಾರ್ಗದರ್ಶಿ ಚಿಟ್ ಫಂಡ್, ಈನಾಡು ಪತ್ರಿಕೆ. ಈಟಿವಿ ನೆಟ್‌ ವರ್ಕ್‌, ರಮಾ ದೇವಿ ಪಬ್ಲಿಕ್ ಶಾಲೆ, ಪ್ರಿಯಾ ಫುಡ್ಸ್, ಕಲಾಂಜಲಿ, ಉಷಾಕಿರಣ್ ಮೂವೀಸ್, ಮಯೂರಿ ಫಿಲ್ಮ್ ಡಿಸ್ಟ್ರಿಬ್ಯೂಷನ್, ಡಾಲ್ಫಿನ್ಸ್ ಹೋಟೆಲ್ಸ್.. ಹೀಗೆ ರಾಮೋಜಿ ರಾವ್ ಅವರ ಉದ್ಯಮ ಸಾಹಸಗಳು ಒಂದೆರಡಲ್ಲ.
ರಾಜಕಾರಣದಲ್ಲೂ ಪ್ರಭಾವಿ ರಾಮೋಜಿ ರಾವ್ : ರಾಮೋಜಿ ರಾವ್ ಅವರು ತೆಲುಗು ರಾಜಕೀಯದಲ್ಲೂ ಸಕ್ರಿಯ ಪಾತ್ರ ವಹಿಸಿದ್ದರು. ರಾಜಕೀಯ ನಾಯಕರಿಗೆ ಮಹತ್ವದ ಸಲಹೆಗಳನ್ನ ನೀಡುವ ಮೂಲಕ ಮಾರ್ಗದರ್ಶಿಯಾಗಿದ್ದರು. ಭಾರತ ಸರ್ಕಾರವು ರಾಮೋಜಿ ರಾವ್ ಅವರಿಗೆ ದೇಶದ ಎರಡನೇ ಅತಿ ದೊಡ್ಡ ನಾಗರಿಕ ಪುರಸ್ಕಾರವಾದ ಪದ್ಮ ವಿಭೂಷಣ ಪುರಸ್ಕಾರವನ್ನು 2016ರಲ್ಲಿ ಪ್ರಧಾನ ಮಾಡಿತ್ತು. ಪತ್ರಿಕೋದ್ಯಮ, ಸಾಹಿತ್ಯ, ಸಿನಿಮಾ ಹಾಗೂ ಶಿಕ್ಷಣ ರಂಗದಲ್ಲಿ ರಾಮೋಜಿ ರಾವ್ ಅವರು ನೀಡಿದ ಕೊಡುಗೆಗಳನ್ನು ಪರಿಣಿಸಿ ಅವರಿಗೆ ಈ ಪುರಸ್ಕಾರ ನೀಡಲಾಗಿತ್ತು.

ಇದನ್ನೂ ಓದಿ : ತುಮಕೂರು : ವಿದ್ಯಾರ್ಥಿನಿಯರ ವಸತಿ ಶಾಲೆಯಲ್ಲಿ ಬೆಂಕಿ ಅವಘಡ..! 

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here