Download Our App

Follow us

Home » ಅಪರಾಧ » ಅತ್ಯಾಚಾರ ಆರೋಪ : ಮಾಜಿ ಮಂತ್ರಿ ಮುನಿರತ್ನ ಸೇರಿ 7 ಮಂದಿ ವಿರುದ್ಧ FIR ದಾಖಲು..!

ಅತ್ಯಾಚಾರ ಆರೋಪ : ಮಾಜಿ ಮಂತ್ರಿ ಮುನಿರತ್ನ ಸೇರಿ 7 ಮಂದಿ ವಿರುದ್ಧ FIR ದಾಖಲು..!

ಬೆಂಗಳೂರು : ಗುತ್ತಿಗೆದಾರನಿಗೆ ಜಾತಿನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಜೈಲು ಸೇರಿರುವ ಶಾಸಕ ಮುನಿರತ್ನಗೆ ಮತ್ತೊಂದು ದೊಡ್ಡ ಸಂಕಷ್ಟ ಎದುರಾಗಿದೆ.

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಗಂಭೀರ ಆರೋಪ ಶಾಸಕ ಮುನಿರತ್ನ ವಿರುದ್ದ ಕೇಳಿಬಂದಿದ್ದು, ಈ ಸಂಬಂಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಸೇರಿದಂತೆ 7 ಮಂದಿ ಮೇಲೆ FIR ದಾಖಲಾಗಿದೆ.

ಕಗ್ಗಲೀಪುರ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದು, ಖಾಸಗಿ ರೆಸಾರ್ಟ್​ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿದ್ದಾರೆ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಶಾಸಕ ಮುನಿರತ್ನ, ವಿಜಯಕುಮಾರ್, ಸುಧಾಕರ, ಕಿರಣ್‌ ಕುಮಾರ್​, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕೇಶ್​ ಸೇರಿ 7 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ದೂರು ಪರಿಶೀಲಿಸಿದ ಠಾಣೆಯ ಅಧಿಕಾರಿಗಳು ನಂತರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೇಲ್​​ ನಿರೀಕ್ಷೆಯಲ್ಲಿದ್ದ ಮುನಿರತ್ನಗೆ ಇದೀಗ ದೊಡ್ಡ ಸಂಕಷ್ಟ ಎದುರಾಗಿದ್ದು, 354(e), 354(C), 376, 506, 504, 120B, 149, 384, 406, 308 ಅಡಿ ಕೇಸ್​ ದಾಖಲಾಗಿದೆ.

ಇದನ್ನೂ ಓದಿ : ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ FIR ದಾಖಲು – ಕಾರಣ?

Leave a Comment

DG Ad

RELATED LATEST NEWS

Top Headlines

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ – ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ..!

ಚಿಕ್ಕಮಗಳೂರು : ಇತ್ತೀಚೆಗೆ ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಾನದಲ್ಲಿ ಹಾಗೂ ಸುತ್ತಲಿನ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಿತ್ತು. ಇದೀಗ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹೊರನಾಡು ಶ್ರೀ

Live Cricket

Add Your Heading Text Here