ಬೆಂಗಳೂರು : ಪೆನ್‌ಡ್ರೈವ್ ಪ್ರಕರಣದಲ್ಲಿ ಹತ್ತು ದಿನಗಳ ಹಿಂದೆ ಬಂಧಿತನಾಗಿದ್ದ ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದ ಎಸ್‌ಐಟಿ ಕಸ್ಟಡಿ ಅವಧಿ ಇಂದು ಅತ್ಯವಾಗಿದೆ. ಇಂದು ಮಧ್ಯಾಹ್ನ ಅವರನ್ನು ಮತ್ತೆ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಾಜರುಪಡಿಸಿದ್ದಾರೆ. ಇದೀಗ ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣಗೆ 14ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಎರಡನೇ ಭಾರಿಗೆ ವಶಕ್ಕೆ ಪಡೆದಿದ್ದ ಎಸ್‌ಐಟಿ ಅಧಿಕಾರಿಗಳ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಬಸವನಗುಡಿಯಲ್ಲಿ ಸ್ಥಳ ಮಹಜರು ಬಳಿಕ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಇಂದು ಹಾಜರುಪಡಿಸಿದ್ದರು. ಪ್ರಜ್ವಲ್ ಮೇಲೆ ಇನ್ನು ಎರಡು ಅತ್ಯಾಚಾರ ಪ್ರಕರಣಗಳ ತನಿಖೆ ಬಾಕಿ.
ಕೋರ್ಟ್ ವಿಚಾರಣೆ ವೇಳೆ ಪ್ರಜ್ವಲ್ನ್ನು ಮತ್ತೆ ಕಸ್ಟಡಿಗೆ ಕೊಡುವಂತೆ SIT ಕೇಳಿದೆ. SIT ಮತ್ತಷ್ಟು ವಿಚಾರಣೆ ಮಾಡಬೇಕಿರುವ ಹಿನ್ನೆಲೆ ಕಸ್ಟಡಿಗೆ ನೀಡುವಂತೆ ಕೇಳಿದ ಎಸ್‌ಐಟಿ ಪರ ವಕೀಲರು ಕೇಳಿದ್ದಾರೆ. ಈ ವೇಳೆ ಎಸ್‌ಐಟಿ ವಶಕ್ಕೆ ಕೊಡದಂತೆ ಪ್ರಜ್ವಲ್ ಪರ ವಕೀಲರು ವಾದ ಮಂಡಿಸಿದ್ದಾರೆ. ಆದರೆ ಕೋರ್ಟ್ ಜೂನ್ 24ರವರೆಗೂ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.
ಇದನ್ನೂ ಓದಿ : “ದೇಸಾಯಿ” ಚಿತ್ರದ ಸಾಂಗ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್..!