ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳ ಮೇಲಿನ ಆದೇಶವನ್ನು ಹೈಕೋರ್ಟ್ ಇಂದು ಪ್ರಕಟಿಸಲಿದೆ.
ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ ಅರ್ಜಿಗಳನ್ನು ವಿಚಾರಣೆ ನಡೆಸಿ ಕಾಯ್ದಿರಿಸಲಾಗಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಪ್ರಕಟಿಸಲಿದೆ.
ಪ್ರಜ್ವಲ್ ರೇವಣ್ಣ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್ನಲ್ಲಿ ದಾಖಲಾಗಿದ್ದ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದಾರೆ.
ಕಳೆದ 120 ದಿನಗಳಿಂದಲೂ ಜೈಲಿನಲ್ಲಿರೋ ಪ್ರಜ್ವಲ್ ರೇವಣ್ಣಗೆ ಜಾಮೀಮಿನ ಆಸೆ ಚಿಗುರೊಡೆದಿದೆ. ಆದ್ರೆ ಇಂದು ಪ್ರಜ್ವಲ್ ರೇವಣ್ಣಗೆ ಬೇಲ್ ಸಿಗುತ್ತಾ ಎಂದು ಕಾದು ನೋಡಬೇಕು…
ಇದನ್ನೂ ಓದಿ : ಭಾರೀ ಮಳೆಗೆ ಮುಳುಗಿದ ಬೆಂಗಳೂರು.. ಹಲವೆಡೆ ಅವಾಂತರ, ಜನಜೀವನ ಅಸ್ತವ್ಯಸ್ತ..!
Post Views: 115