ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಇದೀಗ ಸೌತ್‌ನಲ್ಲಿ ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದು, ಬಾಲಿವುಡ್‌ನಲ್ಲೂ ರಶ್ಮಿಕಾ ಹಂಗಾಮ ಜೋರಾಗಿದೆ. ಮೊನ್ನೆಯಷ್ಟೇ ನಟಿ ಬಣ್ಣದ ಬದುಕಿಗೆ ಎಂಟ್ರಿ ಕೊಟ್ಟು 8 ವರ್ಷಗಳು ಕಳೆದಿವೆ. ಕಿರಿಕ್ ಪಾರ್ಟಿ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ರಶ್ಮಿಕಾ ಮಂದಣ್ಣಗೆ ನ್ಯಾಷನಲ್ ಕ್ರಶ್ ಎಂಬ ಬಿರುದು ಕೂಡ ಸಿಕ್ಕಿದೆ.
ಕಿರಿಕ್ ಪಾರ್ಟಿ ಚಿತ್ರದಿಂದಲೇ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮೊದಲ ಬಾರಿಗೆ ನಿರ್ದೇಶಕನಾಗಿ ಗೆದ್ದಿದ್ದು, ಇದೀಗ ಈ ಚಿತ್ರ ಇನ್ನೊಮ್ಮೆ ಸುದ್ದಿಯಲ್ಲಿದೆ. ರಿಷಬ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಫ್ಯಾನ್ಸ್ ನಡುವೆ ಫೈಟ್ಗೆ ಕಾರಣವಾಗಿದೆ.
ಹೌದು.. ಮೊನ್ನೆಯಷ್ಟೇ ತಮ್ಮ ಕನಸಿನ ಕೂಸು ಕಿರಿಕ್ ಪಾರ್ಟಿಗೆ 08 ವರ್ಷ ತುಂಬಿದ ಹಿನ್ನೆಲೆ ರಿಷಬ್ ಶೆಟ್ಟಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಕೃತಜ್ಞತೆ ಸಲ್ಲಿಸಿದ್ದರು. ಕಿರಿಕ್ ಪಾರ್ಟಿ ನಮ್ಮ ಜೀವನದ ಭಾಗವಾಗಿ 08 ವರ್ಷ ಕಳೆದಿವೆ. ಅನೇಕ ಸುಂದರ ನೆನಪುಗಳು ಮತ್ತು ನಿಮ್ಮ ಪ್ರೀತಿ ಈ ಪಯಣವನ್ನು ಅರ್ಥಪೂರ್ಣವನ್ನಾಗಿಸಿವೆ. ನಿಮ್ಮ ಬೆಂಬಲಕ್ಕೆ ಹೃತ್ಫೂರ್ವಕ ಧನ್ಯವಾದಗಳು ಎಂದು ಬರೆದುಕೊಂಡಿದ್ದರು.
ಕಿರಿಕ್ ಪಾರ್ಟಿ ಚಿತ್ರವನ್ನು ನೆನಪು ಮಾಡಿಕೊಳ್ಳುತ್ತಾ ರಿಷಬ್ ಚಿತ್ರದ ಫೋಸ್ಟರ್ ಹಂಚಿಕೊಂಡಿದ್ದಾರೆ. ಆದರೆ, ಹೀಗೆ ಹಂಚಿಕೊಳ್ಳಲಾದ ಪೋಸ್ಟರ್‌ನಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ಬಿಟ್ಟು ಚಿತ್ರದಲ್ಲಿರುವ ಬಹುತೇಕ ಪ್ರಮುಖ ಕಲಾವಿದರು ಇದ್ದಾರೆ. ಇನ್ನು ರಿಷಬ್ ಕಿರಿಕ್ ಪಾರ್ಟಿ ಚಿತ್ರವನ್ನು ನೀಡಿದ್ದಕ್ಕೆ ರಕ್ಷಿತ್ ಶೆಟ್ಟಿ ಅವರಿಗೆ ಧನ್ಯವಾದ ಹೇಳಿದ್ದಾರೆ. ರಕ್ಷಿತ್ ಶೆಟ್ಟಿ ಅವರಿಗೆ ಟ್ಯಾಗ್ ಮಾಡಿದ್ದಾರೆ, ಆದರೆ ರಶ್ಮಿಕಾ ಮಂದಣ್ಣ ಹೆಸರನ್ನು ನಮೂದಿಸಿಲ್ಲ. ರಶ್ಮಿಕಾ ಅವರಿಗೆ ಟ್ಯಾಗ್ ಕೂಡ ಮಾಡಿಲ್ಲ.
ಹಾಗಾಗಿ ರಶ್ಮಿಕಾ ಮಂದಣ್ಣ ಫ್ಯಾನ್ಸ್ ರಿಷಬ್ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಇರದಿದ್ದರೆ ನಿಮ್ಮ ಚಿತ್ರದ ಕಸದ ಬುಟ್ಟಿಗೆ ಸೇರುತ್ತಿತ್ತು. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಇರದಿದ್ದರೆ ಚಿತ್ರ ಖಂಡಿತವಾಗಿಯೂ ಗೆಲ್ಲುತ್ತಿರಲಿಲ್ಲ ಎನ್ನುತ್ತಿದ್ದಾರೆ. ಇನ್ನು, ರಶ್ಮಿಕಾ ಮೊದಲಿಂದ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗುತ್ತಲೇ ಬಂದವರು. ಹೀಗಾಗಿ ಅನೇಕರು ರಿಷಬ್ ಶೆಟ್ಟಿ ಅವರ ನಡೆಯನ್ನು ಅನೇಕರು ಸಮರ್ಥಿಸಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಅವರನ್ನು ಒಳಗೊಂಡ ಪೋಸ್ಟರ್ ಹಂಚಿಕೊಳ್ಳದೇ ಇದ್ದಿದ್ದು ಒಳ್ಳೇಯದಾಯಿತು ಎಂದಿದ್ದಾರೆ.
ಇದನ್ನೂ ಓದಿ : ರೇವ್ ಪಾರ್ಟಿ ಕೇಸ್ : ನಟಿ ಹೇಮಾ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ..!