Download Our App

Follow us

Home » ರಾಜಕೀಯ » ಹುಬ್ಬಳ್ಳಿ ನೇಹಾ ಹಿರೇಮಠ ನಿವಾಸಕ್ಕೆ ವಿಪಕ್ಷ ನಾಯಕ ಆರ್​.ಅಶೋಕ್,​ ಬಸವರಾಜ ಬೊಮ್ಮಾಯಿ ಭೇಟಿ..!

ಹುಬ್ಬಳ್ಳಿ ನೇಹಾ ಹಿರೇಮಠ ನಿವಾಸಕ್ಕೆ ವಿಪಕ್ಷ ನಾಯಕ ಆರ್​.ಅಶೋಕ್,​ ಬಸವರಾಜ ಬೊಮ್ಮಾಯಿ ಭೇಟಿ..!

ಹುಬ್ಬಳ್ಳಿ : ಇತ್ತೀಚೆಗೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಆವರಣದಲ್ಲಿ ಫಯಾಜ್ ಎಂಬ ಯುವಕನಿಂದ ಹತ್ಯೆಗೀಡಾದ ಹುಬ್ಬಳ್ಳಿಯ ನೇಹಾ ಹಿರೇಮಠ ಕುಟುಂಬಸ್ಥರನ್ನು ಬಿಜೆಪಿ ನಾಯಕರು ಇಂದು ಭೇಟಿ ಮಾಡಿದ್ದಾರೆ.

ನೇಹಾ ಹಿರೇಮಠ ಅವರ ಮನೆಗೆ ಇಂದು ಬಿಜೆಪಿ ನಾಯಕರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಂಸದ ಪ್ರಹ್ಲಾದ್ ಜೋಶಿ ಸೇರಿದಂತೆ ಬಿಜೆಪಿ ನಾಯಕರು ನೇಹಾ ಹಿರೇಮಠ ಮನೆಗೆ ಭೇಟಿ ನೀಡಿದ್ದರು. ಇದಾದ ಬಳಿಕ ಸಿಎಂ ಸಿದ್ದರಾಮಯ್ಯ ಕೂಡಾ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಇದೀಗ ನೇಹಾ ಹಿರೇಮಠ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಭೇಟಿ ನೀಡಿ, ನಿರಂಜ‌ನ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಶಾಸಕರಾದ ಮಹೇಶ ಟೆಂಗಿನಕಾಯಿ ಅವರು ಹಾಜರಿದ್ದರು.

ಪ್ರಕರಣದ ಹಿನ್ನೆಲೆ : ಏ.18 ರ ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ ತನ್ನ ಕೈಯಲ್ಲಿ ಚಾಕು ಹಿಡಿದು, ಮಾಸ್ಕ್ ಧರಿಸಿಕೊಂಡು ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಳು.

ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ ಫಯಾಜ್‍ನನ್ನು ಬಂಧಿಸಲಾಗಿದೆ. ಸುದ್ದಿ ಹಬ್ಬುತ್ತಿದ್ದಂತೆಯೇ ರಾಜ್ಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಇಳಿದವು. ಆರೋಪಿಯನ್ನು ಎನ್​ಕೌಂಟರ್ ಮಾಡಿ ಇಲ್ಲವೇ ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದರು. ಇಂದು ಕೂಡ ಪ್ರತಿಭಟನೆಗಳು ಮುಂದುವರಿದಿದೆ. ಈ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದ್ದಂತೆಯೇ ಕಾಂಗ್ರೆಸ್ ನಾಯಕರ ವಿರುದ್ಧ ನೇಹಾ ತಂದೆ ನಿರಂಜನ್ ಹಿರೇಮಠ ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಪ್ರಕರಣವನ್ನು ರಾಜ್ಯ ಸರ್ಕಾರ CID ಒಪ್ಪಿಸಲಾಗಿತ್ತು. ಇದೀಗ ಆರೋಪಿ ಫಯಾಜ್​ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ತನಿಖೆ ಮುಂದುವರೆದಿದೆ.

ಇದನ್ನೂ ಓದಿ : ಬೆಂಗಳೂರು : ಹೆತ್ತ ಮಗಳನ್ನೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊ*ಲೆ ಮಾಡಿದ ತಾಯಿ – ಅಸಲಿಗೆ ಆಗಿದ್ದೇನು?

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here