ಕೊಪ್ಪಳ : ಯಾದಗಿರಿಯಲ್ಲಿ ಮೃತಪಟ್ಟ ಪಿಎಸ್ಐ ಪರಶುರಾಮ್ ಅವರ ಕುಟುಂಬದ ಸದಸ್ಯರಿಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಸಾಂತ್ವನ ಹೇಳಿದರು.
ಇಂದು ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿರುವ ಮೃತ ಪರಶುರಾಮ್ ನಿವಾಸಕ್ಕೆ ಆರ್.ಅಶೋಕ್ ನೀಡಿದರು. ಧೈರ್ಯ ತಂದುಕೊಳ್ಳಿ, ಮಗನ ಸಾವಿಗೆ ನ್ಯಾಯ ಸಿಗುತ್ತೆ ಎಂದು ಪುತ್ರನ ಕಳೆದುಕೊಂಡ ಪರಶುರಾಮ್ ತಂದೆಗೆ ಅಶೋಕ್ ಧೈರ್ಯ ತುಂಬಿದ್ದಾರೆ.
ಈ ವೇಳೆ ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮಾಜಿ ಸಚಿವ ರಾಜುಗೌಡ, ಹಾಲಪ್ಪ ಆಚಾರ್, ಬಸವರಾಜ್ ದಡೇಸೂಗೂರು, ಶಾಸಕ ದೊಡ್ಡನಗೌಡ ಪಾಟೀಲ್ ಸೇರಿ ಹಲವು ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ.
ಇದನ್ನೂ ಓದಿ : ಸಿದ್ದರಾಮಯ್ಯ ರಾಜ್ಯದಲ್ಲಿರುವ ಲಜ್ಜೆಗೆಟ್ಟ ಮುಖ್ಯಮಂತ್ರಿ – ಸಚಿವ ಪ್ರಹ್ಲಾದ್ ಜೋಶಿ ಕಿಡಿ..!
Post Views: 112