ಬೆಂಗಳೂರು : ವರ್ಗಾವಣೆ ದಂಧೆ, ಲೈಸೆನ್ಸ್ ಮಂಜೂರಾತಿ, ಮದ್ಯದ ಅಂಗಡಿಗಳಿಂದ ‘ಮಂಥ್ಲಿ ಮನಿ’ ಸೇರಿದಂತೆ ಅಬಕಾರಿ ಸಚಿವರು ವರ್ಷಕ್ಕೆ ಸುಮಾರು 500 ಕೋಟಿ ರೂಪಾಯಿ ಭ್ರಷ್ಟಾಚಾರ ಎಸಗುತ್ತಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘ ಗಂಭೀರ ಆರೋಪ ಮಾಡಿದೆ. ಇದೀಗ ಈ ವಿಚಾರವಾಗಿ ಅಬಕಾರಿ ಸಚಿವ ಆರ್. ಬಿ ತಿಮ್ಮಾಪುರ ಅವರ ವಿರುದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಅಬಕಾರಿ ಸಚಿವರ ವಿರುದ್ಧ ಗುಡುಗಿದ ಕೇಂದ್ರ ಸಚಿವ ಹೆಚ್ಡಿಕೆ, ಕಾಂಗ್ರೆಸ್ ಸರ್ಕಾರ ಲೂಟಿ ಸರ್ಕಾರ. ರಾಜ್ಯದ ಎಲ್ಲಾ ಮಂತ್ರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ತಕ್ಷಣವೇ ಆರ್ ಬಿ ತಿಮ್ಮಾಪುರ ರಾಜೀನಾಮೆ ಪಡೆಯಿರಿ. ಸಂಪುಟದಲ್ಲಿ ತಿಮ್ಮಾಪುರ ಅವರನ್ನು ಇಟ್ಕೋಬೇಡಿ ಎಂದು ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಭ್ರಷ್ಟಾಚಾರ ಆರೋಪ – ನಾನು ಯಾವ ಕೋಟಿಯನ್ನೂ ನೋಡಿಲ್ಲ, ಗೊತ್ತಿಲ್ಲ ಎಂದ ಸಚಿವ ತಿಮ್ಮಾಪುರ..!
Post Views: 110