Download Our App

Follow us

Home » ಕ್ರೀಡೆ » ಇಂದು ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಲಕ್ನೋ ರೋಚಕ ಕದನ – ಪಂದ್ಯ ಎಷ್ಟು ಗಂಟೆಗೆ ಆರಂಭ?

ಇಂದು ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಲಕ್ನೋ ರೋಚಕ ಕದನ – ಪಂದ್ಯ ಎಷ್ಟು ಗಂಟೆಗೆ ಆರಂಭ?

ಬೆಂಗಳೂರು : ಐಪಿಎಲ್ 2024ರ 15ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ಇಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಒಂದೆಡೆ ಆರ್‌ಸಿಬಿ ತನ್ನ ಕಳೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋಲನುಭವಿಸಿ ಈ ಪಂದ್ಯಕ್ಕೆ ಕಾಲಿಡುತ್ತಿದ್ದರೆ, ಇನ್ನೊಂದೆಡೆ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಜಯ ಸಾಧಿಸಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲುವಿನೊಂದಿಗೆ ಅಖಾಡಕ್ಕಿಳಿಯುತ್ತಿದೆ. ಕಳೆದ ಸೀಸನ್​ನಲ್ಲಿ ನಡೆದ ಈ ಉಭಯ ತಂಡಗಳ ಮುಖಾಮುಖಿ ರೋಚಕತೆಯಿಂದ ಕೂಡಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲೂ ಅದೇ ರೋಚಕತೆಗೆ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

ಒಂದೆಡೆ ಆರ್‌ಸಿಬಿ ತನ್ನ ಕಳೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋಲನುಭವಿಸಿ ಈ ಪಂದ್ಯಕ್ಕೆ ಕಾಲಿಡುತ್ತಿದ್ದರೆ, ಇನ್ನೊಂದೆಡೆ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಜಯ ಸಾಧಿಸಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲುವಿನೊಂದಿಗೆ ಅಖಾಡಕ್ಕಿಳಿಯುತ್ತಿದೆ. ಕಳೆದ ಸೀಸನ್​ನಲ್ಲಿ ನಡೆದ ಈ ಉಭಯ ತಂಡಗಳ ಮುಖಾಮುಖಿ ರೋಚಕತೆಯಿಂದ ಕೂಡಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲೂ ಅದೇ ರೋಚಕತೆಗೆ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

ಉಭಯ ತಂಡಗಳು ಹೀಗಿವೆ :

ರಾಯಲ್ ಚಾಲೆಂಜರ್ಸ್ ಬೆಂಗಳೂರು : ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯ್ಯಾಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ ವಿಜಯಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾನ್.

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ದೇವದತ್ ಪಡಿಕ್ಕಲ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ಯುಧ್ವೀರ್ ಸಿಂಗ್, ಪ್ರೇರಕ್ ಮಂಕಡ್. ಯಶ್ ಠಾಕೂರ್, ಅಮಿತ್ ಮಿಶ್ರಾ, ಶಮರ್ ಜೋಸೆಫ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಕೆ. ಗೌತಮ್, ಶಿವಂ ಮಾವಿ, ಅರ್ಶಿನ್ ಕುಲಕರ್ಣಿ, ಎಂ.ಸಿದ್ಧಾರ್ಥ್, ಆಷ್ಟನ್ ಟರ್ನರ್, ಮ್ಯಾಟ್ ಹೆನ್ರಿ, ಮೊಹಮ್ಮದ್ ಅರ್ಷದ್ ಖಾನ್.

ಆರ್​ಸಿಬಿ vs ಲಕ್ನೋ ನಡುವಿನ ಐಪಿಎಲ್​ 15ನೇ ಪಂದ್ಯ ಯಾವ ಸಮಯಕ್ಕೆ ಆರಂಭವಾಗುತ್ತದೆ? ಆರ್​ಸಿಬಿ vs ಲಕ್ನೋ ನಡುವಿನ ಐಪಿಎಲ್​ 15ನೇ ಪಂದ್ಯ ರಾತ್ರಿ 7:30ಕ್ಕೆ ಆರಂಭವಾಗಲಿದೆ.  ಆರ್​ಸಿಬಿ vs ಲಕ್ನೋ ನಡುವಿನ ಐಪಿಎಲ್​ 15ನೇ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು. ಆರ್​ಸಿಬಿ vs ಲಕ್ನೋ ನಡುವಿನ ಪಂದ್ಯವನ್ನು ಮೊಬೈಲ್‌ನಲ್ಲಿರುವ Jio ಸಿನಿಮಾ ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಇದನ್ನೂ ಓದಿ : ರಾಜ್ಯದಲ್ಲಿಂದು ಅಮಿತ್‌ ಶಾ ಲೋಕಸಭೆ ಪ್ರಚಾರದ ರಣಕಹಳೆ – ಬಂಡಾಯ ಶಮನಕ್ಕೆ ‘ಶಾ’ ನೇರ ಪ್ರವೇಶ..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಬೈಕ್ ಸವಾರನ ಶವವನ್ನು 18 ಕಿ.ಮೀ​ ಎಳೆದೊಯ್ದು ಪರಾರಿಯಾದ ಕಾರು ಚಾಲಕ..!

ಕಾರು ಚಾಲಕನೊಬ್ಬ ಬೈಕ್​ಗೆ ಡಿಕ್ಕಿ ಹೊಡೆದು ಸವಾರನನ್ನು ಬರೋಬ್ಬರಿ 18 ಕಿಲೋ. ಮೀಟರ್​ ದೂರಕ್ಕೆ ಎಳೆದೊಯ್ದು ಪರಾರಿಯಾಗಿರುವ ಘಟನೆ ಅನಂತಪುರದಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ

Live Cricket

Add Your Heading Text Here