Download Our App

Follow us

Home » ಕ್ರೀಡೆ » ಐಪಿಎಲ್ 2024 : ತವರು ನೆಲದಲ್ಲಿಂದು ‘ಹೊಸ ಅಧ್ಯಾಯ’ಕ್ಕೆ ಮುನ್ನುಡಿ ಬರೆಯುತ್ತಾ ಆರ್​ಸಿಬಿ?

ಐಪಿಎಲ್ 2024 : ತವರು ನೆಲದಲ್ಲಿಂದು ‘ಹೊಸ ಅಧ್ಯಾಯ’ಕ್ಕೆ ಮುನ್ನುಡಿ ಬರೆಯುತ್ತಾ ಆರ್​ಸಿಬಿ?

ಬೆಂಗಳೂರು : ಐಪಿಎಲ್ 2024ರ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯ ಸೋಲನ್ನು ಎದುರಿಸಬೇಕಾಯಿತು. ಚೆಪಾಕ್​ನಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡಲ್ಲೂ ವಿಫವಾಗಿತ್ತು.

ಆದರೀಗ ಸೋಲಿನೊಂದಿಗೆ ಲೀಗ್​ ಆರಂಭಿಸಿರುವ ಆರ್​ಸಿಬಿ ತನ್ನ ತವರಿನಲ್ಲಿ ಅಂದರೆ ಬೆಂಗಳೂರಿನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಲು ಸಜ್ಜಾಗಿದೆ. ಈ ಪಂದ್ಯದಲ್ಲಿ ಆರ್​ಸಿಬಿಯ ಎದುರಾಳಿಯಾಗಿ ಪಂಜಾಬ್ ಕಿಂಗ್ಸ್ ಕಣಕ್ಕಿಳಿಯುತ್ತಿದೆ. ಒಂದೆಡೆ ಆರ್​ಸಿಬಿ ತನ್ನ ಮೊದಲ ಗೆಲುವಿಗಾಗಿ ಕಾಯುತ್ತಿದ್ದರೆ, ಇನ್ನೊಂದೆಡೆ ಆಡಿದ ಮೊದಲ ಪಂದ್ಯದಲ್ಲೇ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿರುವ ಪಂಜಾಬ್ ತಂಡ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಲು ಎದುರು ನೋಡುತ್ತಿದೆ.

ಆರ್​ಸಿಬಿಯ ತವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ನಡೆಯಲಿರುವ ಪಂದ್ಯದಲ್ಲಿ ಬ್ಯಾಟರ್ ಗಳ ಅಬ್ಬರ ಜೋರಾಗಿರುವ ಸಾಧ್ಯತೆ ಇದೆ. ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಆರ್‌ಸಿಬಿ ತವರಿನ ಲಾಭ ಪಡೆದರೆ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಬಹುದು.

ಚಿನ್ನಸ್ವಾಮಿಯಲ್ಲಿ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್ ಅವರ ಮೇಲೆ ದೊಡ್ಡ ಮೊತ್ತ ಪೇರಿಸುವ ಜವಾಬ್ದಾರಿ ಇದೆ. ಪಂಜಾಬ್‌ ಕಿಂಗ್ಸ್ ತಂಡದಲ್ಲಿ ಕೂಡ ಬಲಿಷ್ಠ ಬ್ಯಾಟಿಂಗ್ ಪಡೆ ಇದೆ. ಶಿಖರ್ ಧವನ್, ಜಾನಿ ಬೈರ್ ಸ್ಟೋ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಸ್ಯಾಮ್ ಕರನ್, ಪ್ರಭ್‌ಸಿಮ್ರಾನ್ ಸಿಂಗ್ ಮೇಲೆ ರನ್ ಗಳಿಸುವ ಜವಾಬ್ದಾರಿ ಇದೆ.

ಚಿನ್ನಸ್ವಾಮಿ ಪಿಚ್ ಹೇಗಿದೆ? ಚಿನ್ನಸ್ವಾಮಿ ಪಿಚ್ ಸಾಮಾನ್ಯವಾಗಿ ಬ್ಯಾಟಿಂಗ್‌ಗೆ ಹೆಚ್ಚಿನ ನೆರವು ನೀಡುತ್ತದೆ. ಆದರೂ, ಸ್ಪಿನ್ ಮತ್ತು ನಿಧಾನ ಗತಿಯ ಬೌಲಿಂಗ್ ಮಾಡಿದ ಬ್ಯಾಟರ್ ಗಳನ್ನು ಕಟ್ಟಿಹಾಕಬಹುದಾಗಿದೆ. ಮೊದಲು ಬ್ಯಾಟಿಂಗ್ ಮಾಡುವ ತಂಡ 180-190 ರನ್ ಗಳಿಸಿದರೆ ಗೆಲ್ಲುವ ಸಾಧ್ಯತೆ ಹೆಚ್ಚಿದೆ.

ಉಭಯ ತಂಡಗಳು ಈ ಕೆಳಗಿನಂತಿವೆ :

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್ ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೂನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ಪಂಜಾಬ್ ಕಿಂಗ್ಸ್ : ಶಿಖರ್ ಧವನ್ (ನಾಯಕ), ಮ್ಯಾಥ್ಯೂ ಶಾರ್ಟ್, ಪ್ರಭ್‌ಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ, ಸಿಕಂದರ್ ರಜಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಟೇಡೆ, ಅರ್ಷ್‌ದೀಪ್ ಸಿಂಗ್, ನಾಥನ್ ಎಲ್ಲಿಸ್, ಸ್ಯಾಮ್ ಕರನ್, ಕಗಿಸೊ ರಬಾಡ, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಹರ್‌ಪ್ರೀತ್ ಭಾತ್ರಿಯಾ ., ವಿದ್ವತ್ ಕಾವೇರಪ್ಪ, ಶಿವಂ ಸಿಂಗ್, ಹರ್ಷಲ್ ಪಟೇಲ್, ಕ್ರಿಸ್ ವೋಕ್ಸ್, ಅಶುತೋಷ್ ಶರ್ಮಾ, ವಿಶ್ವನಾಥ್ ಪ್ರತಾಪ್ ಸಿಂಗ್, ಶಶಾಂಕ್ ಸಿಂಗ್, ತನಯ್ ತ್ಯಾಗರಾಜನ್, ಪ್ರಿನ್ಸ್ ಚೌಧರಿ, ರಿಲೆ ರೋಸ್ಸೋ.

ಇದನ್ನೂ ಓದಿ : ಬೆಂಗಳೂರು : ಆಟೋ ಪಾರ್ಕಿಂಗ್ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ಗಲಾಟೆ – ಕೋಮು ಸಂಘರ್ಷವಲ್ಲ ಎಂದು ಪೊಲೀಸರಿಂದ ಸ್ಪಷ್ಟನೆ..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here