ಮಂಡ್ಯ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲೂ ಧಾರಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆ ನದಿಯ ಪಾತ್ರದಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದ್ದು, ಕ್ಷಣ ಕ್ಷಣಕ್ಕೂ KRS ಡ್ಯಾಂ ಒಳಹರಿವು ಹೆಚ್ಚಳವಾಗುತ್ತಿದೆ.
ಡ್ಯಾಂನಿಂದ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತದೆ. KRS ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿ ಆಗಿದ್ದು, ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಡಲು ಸಿದ್ಧತೆ ನಡೆಯುತ್ತಿದೆ. ಸದ್ಯ 70 ಸಾವಿರ ಕ್ಯೂಸೆಕ್ ನೀರನ್ನ ನದಿಗೆ ಬಿಡಲಾಗಿತ್ತು. ಇನ್ನು ಕೆಲವೇ ಕ್ಷಣದಲ್ಲಿ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಡುಗಡೆಯಾಗಲಿದೆ. ಹಾಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಎಚ್ಚರಿಕೆ ಕೊಟ್ಟಿದ್ದು, ನದಿಗೆ ಇಳಿಯದಂತೆ, ನದಿ ದಡದಲ್ಲಿದ್ದರೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಪರಶುರಾಮ ಥೀಮ್ ಪಾರ್ಕ್ ಹಗರಣ – ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಸ್ಪೆಂಡ್..!