Download Our App

Follow us

Home » ಸಿನಿಮಾ » ಶರಣ್ ಅಭಿನಯದ “ಛೂ ಮಂತರ್” ಚಿತ್ರದ ಬಿಡುಗಡೆ ಮುಂದೂಡಿಕೆ..!

ಶರಣ್ ಅಭಿನಯದ “ಛೂ ಮಂತರ್” ಚಿತ್ರದ ಬಿಡುಗಡೆ ಮುಂದೂಡಿಕೆ..!

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ‌ ಮಂತರ್” ಚಿತ್ರ ಮೇ 10 ರಂದು ಬಿಡುಗಡೆ ಮಾಡುವುದಾಗಿ ಮೊದಲು ತಿಳಿಸಲಾಗಿತ್ತು. ಈಗ ಸಿನಿಮಾ ಬಿಡುಗಡೆ ಸ್ವಲ್ಪ ಮುಂದೆ ಹೋಗಿದೆ.

ಚಿತ್ರವನ್ನು ವೀಕ್ಷಿಸಿರುವ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳ ವಿತರಕರು, ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಹಾರಾರ್ ಚಿತ್ರವಾಗಿದ್ದು, ಉತ್ತಮವಾಗಿ ಮೂಡಿಬಂದಿದೆ. ಈ ಚಿತ್ರ ಎಲ್ಲಾ ಭಾಷೆಗಳ ಜನರು ನೋಡುವ ಕಥಾಹಂದರವನ್ನು ಹೊಂದಿದೆ. ಈಗ ದೇಶಾದ್ಯಂತ ಚುನಾವಣೆ ಕೂಡ ನಡೆಯುತ್ತಿದೆ. ಹಾಗಾಗಿ, ಸರಿಯಾದ ಸಮಯ ನೋಡಿಕೊಂಡು ಚಿತ್ರ ಬಿಡುಗಡೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಕಾರಣಗಳಿಂದ ನಮ್ಮ ಚಿತ್ರವನ್ನು ಮೇ 10 ರಂದು ಬಿಡುಗಡೆ ಮಾಡುತ್ತಿಲ್ಲ. ಮುಂದಿನ ದಿನಾಂಕವನ್ನು ಸದ್ಯದಲ್ಲೇ ತಿಳಿಸುತ್ತವೆ ಎಂದು ನಿರ್ಮಾಪಕ ತರುಣ್ ಶಿವಪ್ಪ ತಿಳಿಸಿದ್ದಾರೆ‌.

ಈಗಾಗಲೇ‌ ಟೀಸರ್, ಟ್ರೇಲರ್ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ತಾರಾಬಳಗದಲ್ಲಿ ಶರಣ್, ಚಿಕ್ಕಣ್ಣ, ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಂತಾದವರಿದ್ದಾರೆ. ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ನಿರ್ದೇಶನವಿರುವ “ಛೂ ಮಂತರ್” ಚಿತ್ರಕ್ಕೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ : ಸಿನಿಮಾ ಇಂಡಸ್ಟ್ರಿ ಇಷ್ಟ ಆಗ್ತಿಲ್ಲ, ರಾಜಕೀಯಕ್ಕೆ ಎಂಟ್ರಿ ಕೊಡ್ಬೇಕು ಅಂದ್ಕೊಂಡಿದ್ದೀನಿ – ಸೋನು ಶ್ರೀನಿವಾಸ್ ಗೌಡ..!

 

 

 

 

 

Leave a Comment

RELATED LATEST NEWS

Top Headlines

ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಬೆಂಗಳೂರು : ವಾಹನವನ್ನು ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ ನಡೆದು KSRTC ಬಸ್​ ಡ್ರೈವರ್​​ಗೆ ಮಿನಿ ಟ್ರಕ್​​ ಡ್ರೈವರ್ ​​ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ

Live Cricket

Add Your Heading Text Here