ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಿದೆ.
ಆದಾಯ ಮೀರಿ ಆಸ್ತಿ ಗಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅಂದಿನ ಬಿಜೆಪಿ ಸರ್ಕಾರ ಅನುಮತಿ ನೀಡಿತ್ತು. ಆದರೆ ಈ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕ್ಯಾಬಿನೆಟ್ನಲ್ಲಿ ಹಿಂಪಡೆದುಕೊಂಡಿತ್ತು.
ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೊರೆ ಹೋಗಿತ್ತು. ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆದಿದ್ದು ತಪ್ಪು ಎಂದು ಸಿಬಿಐ ಪ್ರತಿಪಾದಿಸಿದೆ. ಮತ್ತೊಂದು ಕಡೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡಾ ಅರ್ಜಿ ಸಲ್ಲಿಸಿದ್ದರು.
ಇದೀಗ CBI ಮತ್ತು ಬಸನಗೌಡ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಇನ್ನು ರಾಜ್ಯ -CBI ನಡುವಿನ ವಿವಾದ ಸುಪ್ರೀಂ ಕೋರ್ಟ್ ಬಗೆಹರಿಸಬೇಕು.
ಹೈಕೋರ್ಟ್ ಈ ಬಗ್ಗೆ ತೀರ್ಮಾನಿಸುವುದ ಸೂಕ್ತವಲ್ಲ. ಅರ್ಜಿದಾರರು ಸುಪ್ರೀಂ ಕೋರ್ಟ್ಗೆ ಹೋಗಲು ಅವಕಾಶ ಇದೆ ಎಂದು ಕೋರ್ಟ್ ತಿಳಿಸಿದೆ.
ಇದನ್ನೂ ಓದಿ : ಮುಡಾ ಹಗರಣ ಕೇಸ್ : ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ವಿಚಾರಣೆ ಆ. 31ಕ್ಕೆ ಮುಂದೂಡಿಕೆ..!