Download Our App

Follow us

Home » ಅಪರಾಧ » ಪೋಕ್ಸೋ ಕೇಸ್​​ನಲ್ಲಿ ಯಡಿಯೂರಪ್ಪಗೆ ಬಿಗ್ ರಿಲೀಫ್ – ವಿಚಾರಣೆಗೆ ಹಾಜರಾಗಲು ವಿನಾಯಿತಿ ನೀಡಿದ ಹೈಕೋರ್ಟ್..!

ಪೋಕ್ಸೋ ಕೇಸ್​​ನಲ್ಲಿ ಯಡಿಯೂರಪ್ಪಗೆ ಬಿಗ್ ರಿಲೀಫ್ – ವಿಚಾರಣೆಗೆ ಹಾಜರಾಗಲು ವಿನಾಯಿತಿ ನೀಡಿದ ಹೈಕೋರ್ಟ್..!

ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಸಂಬಂಧ ಪೋಕ್ಸೋ ಕಾಯಿದೆಯಡಿ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಬಿಗ್​​ ರಿಲೀಫ್​​ ಸಿಕ್ಕಿದೆ. ಯಡಿಯೂರಪ್ಪಗೆ ವಿಚಾರಣೆಗೆ ಹಾಜರಾಗಲು ಕೋರ್ಟ್ ವಿನಾಯಿತಿ ನೀಡಿದೆ.

ಈ ಪ್ರಕರಣ ಸಂಬಂಧ  ಜುಲೈ 15ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನಗರದ ವಿಶೇಷ ನ್ಯಾಯಾಲಯ ಸಮನ್ಸ್​ ಜಾರಿ ಮಾಡಿತ್ತು. ಆದರೆ ಬಿ.ಎಸ್​.ಯಡಿಯೂರಪ್ಪ ವಿಚಾರಣೆಗೆ ಹಾಜರಾಗಲು ವಿನಾಯಿತಿ ನೀಡಲು ಹಿರಿಯ ವಕೀಲ ಸಿ ವಿ ನಾಗೇಶ್ ಮೂಲಕ ಕೋರ್ಟ್​ಗೆ ಮನವಿ ಮಾಡಿದ್ದರು.

ಚಾರ್ಜ್ ಶೀಟ್ ಆಗಿದೆ, ಸಮನ್ಸ್ ಕೂಡ ಜಾರಿಯಾಗಿದೆ ಅಂತಾ ಹಿರಿಯ ವಕೀಲ ಸಿ ವಿ ನಾಗೇಶ್ ಅವರು ಕೋರ್ಟ್​ಗೆ  ಮನವಿ ಮಾಡಿದ್ದರು. ಇದೀಗ  ವಕೀಲರ ಮನವಿ ಪುರಸ್ಕರಿಸಿದ ಹೈಕೋರ್ಟ್  ಸೋಮವಾರ ಕೋರ್ಟ್ ಹಾಜರಾಗಲು ವಿನಾಯಿತಿ ನೀಡಿ, ವಿಚಾರಣೆ ಜುಲೈ 26 ಕ್ಕೆ ಮುಂದೂಡಿದೆ. ಇಲ್ಲಿ ವಿಚಾರಣೆ ಆದ ಬಳಿಕ ವಿಚಾರಣಾಧೀನ ನ್ಯಾಯಾಲಯ ಸಮನ್ಸ್ ಜಾರಿ ಮಾಡಲು ಹೈಕೋರ್ಟ್ ತೀರ್ಮಾನ ಮಾಡಿದೆ.

ಇದನ್ನೂ ಓದಿ : ತಮಿಳುನಾಡಿಗೆ ಪ್ರತಿದಿನ 1TMC ನೀರು ಬಿಡಲು ಶಿಫಾರಸ್ಸು – ಸಿಎಂ ನೇತೃತ್ವದಲ್ಲಿ ತುರ್ತು ಸಭೆ ಕರೆದ ಡಿಕೆಶಿ..!

Leave a Comment

DG Ad

RELATED LATEST NEWS

Top Headlines

ನಕಲಿ ನಕ್ಷೆ ಸೃಷ್ಟಿಸಿ ಕಟ್ಟಡ ನಿರ್ಮಾಣ – ಮಾಲೀಕನ ವಿರುದ್ಧ FIR ದಾಖಲು..!

ಬೆಂಗಳೂರು : ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತದ ಬೆನ್ನಲ್ಲೇ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ನಕಲಿ ನಕ್ಷೆ ತಯಾರಿಸಿ ಕಟ್ಟಡ ನಿರ್ಮಿಸಿರುವ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಜರಾಜೇಶ್ವರಿನಗರ

Live Cricket

Add Your Heading Text Here