ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ಅಮಾಯಕ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಕೇಸ್ನಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ದಿನ ಕಳೆದಂತೆ ರೇಣುಕಾಸ್ವಾಮಿ ಕೊಲೆ ಕೇಸ್ ಬಗ್ಗೆ ಪೊಲೀಸ್ ಅಧಿಕಾರಿಗಳು ಒಂದೊಂದೆ ಸಾಕ್ಷಿಯನ್ನು ಕಲೆ ಹಾಕುತ್ತಿದ್ದಾರೆ.
ಇದೀಗ ರೇಣುಕಾಸ್ವಾಮಿ ಹತ್ಯೆ ಬಳಿಕ ನಾಪತ್ತೆಯಾಗಿದ್ದ ಪ್ರಕರಣದ 9ನೇ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ರಾಜು ಅಲಿಯಾಸ್ ಧನರಾಜು ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನಲ್ಲಿ ಸ್ನೇಹಿತನ ಮನೆಯಲ್ಲಿದ್ದಾಗ ಪಶ್ಚಿಮ ವಿಭಾಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಧನರಾಜು ಮೆಗ್ಗರ್ ಡಿವೈಸ್ ಬಳಸಿ ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಿದ್ದ ಎನ್ನಲಾಗಿದೆ. ಎ5 ಆರೋಪಿ ನಂದೀಶ್ ಜೊತೆಗೂಡಿ, ಮೃತನಿಗೆ ಕರೆಂಟ್ ಶಾಕ್ ನೀಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಬಂಧಿತ ಆರೋಪಿಯಿಂದ ಕೃತ್ಯಕ್ಕೆ ಬಳಸಿದ್ದ ಮೆಗ್ಗರ್ ಡಿವೈಸ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ ಬಂಧಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ : ಅಪರಾಧಿಗೆ ಶಿಕ್ಷೆ ಆಗಲಿ, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ – ದರ್ಶನ್ ಬಂಧನದ ಬಗ್ಗೆ ಕಿಚ್ಚ ಸುದೀಪ್ ಫಸ್ಟ್ ರಿಯಾಕ್ಷನ್..!