Download Our App

Follow us

Home » ರಾಜಕೀಯ » ರೇಣುಕಾಸ್ವಾಮಿ ಕೇಸ್​ನಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲಿ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹ..!

ರೇಣುಕಾಸ್ವಾಮಿ ಕೇಸ್​ನಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಲಿ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹ..!

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ವಿಜಯೇಂದ್ರ ಅವರು ಬರೆದುಕೊಂಡಿದ್ದು, “ಚಿತ್ರದುರ್ಗದ ಯುವಕ ರೇಣುಕಾಸ್ವಾಮಿಯನ್ನು ಬರ್ಬರವಾಗಿ ಹತ್ಯೆಗೈಯ್ದಿರುವ ಪ್ರಕರಣ ಅತ್ಯಂತ ಅಮಾನವೀಯ ಹಾಗೂ ಖಂಡನೀಯ. ನಟ ದರ್ಶನ್ ಸೇರಿದಂತೆ ಇತರರ ಮೇಲೆ ಬಂದಿರುವ ಆರೋಪ ಅತ್ಯಂತ ಕಳವಳಕಾರಿ ಘಟನೆಯಾಗಿದೆ.

ಸರ್ಕಾರ ಯಾವುದೇ ಮುಲಾಜಿಗೂ ಈಡಾಗದೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವಂತೆ ತನಿಖೆಯನ್ನು ಬಿಗಿಗೊಳಿಸಲಿ. ಮೃತ ರೇಣುಕಾಸ್ವಾಮಿ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ, ರೇಣುಕಾ ಸ್ವಾಮಿ ಸಾವಿಗೆ ನ್ಯಾಯ ಸಿಗುವಂತಾಗಲಿ” ಎಂದು ಸೋಷಿಯಲ್​ ಮೀಡಿಯಾದಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.

ನಟ ದರ್ಶನ್, ಪವಿತ್ರಾ ಗೌಡ ಹಾಗೂ ಗ್ಯಾಂಗ್‌ನಿಂದ ಅಮಾಯಕನ ಕೊಲೆಯಾಗಿರುವ ಬಗ್ಗೆ ಈಗಾಗಲೇ ತನಿಖೆ ನಡೆಸುತ್ತಿರೋ ಪೊಲೀಸರು, ಮಹತ್ವದ ಸಾಕ್ಷ ಕಲೆ ಹಾಕುತ್ತಿದ್ದಾರೆ. ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆಸಿ, ಬರ್ಬರವಾಗಿ ಹತ್ಯೆ ಮಾಡಿ, ಮೃತ ದೇಹವನ್ನು ಮೋರಿಯಲ್ಲಿ ಎಸೆಯಲಾಗಿತ್ತು. ವಿಚಾರಣೆ ವೇಳೆ ಮೃತ ದೇಹ ಎಸೆಯೋದಕ್ಕೆ 30 ಲಕ್ಷ ರೂಪಾಯಿ ಡೀಲ್ ನಡೆಸಿದ್ದರು ಎಂಬ ವಿಚಾರ ಬಯಲಾಗಿತ್ತು. ಇನ್ನು ಇಡೀ ಪ್ರಕರಣದಲ್ಲಿ ಪವಿತ್ರಾ ಗೌಡ, ದರ್ಶನ್ ಸೇರಿದಂತೆ 13 ಮಂದಿ ಆರೋಪಿಗಳಿದ್ದರು ಎನ್ನಲಾಗಿತ್ತು. ಇದೀಗ ಆರೋಪಿಗಳು 13 ಅಲ್ಲ 17 ಎನ್ನುವುದು ಗೊತ್ತಾಗಿದೆ. ಉಳಿದ 4 ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಇದನ್ನೂ  ಓದಿ : ರೇಣುಕಾಸ್ವಾಮಿ ಕೊ*ಲೆ ಕೇಸ್​​ – ಅಂದು ಶೆಡ್​​ನಲ್ಲಿ ದರ್ಶನ್ ಆಪ್ತ ನಾಗರಾಜ್​​ ಬುಸುಗುಟ್ಟಿದ್ದೇಗೆ?

 

 

 

 

 

Leave a Comment

DG Ad

RELATED LATEST NEWS

Top Headlines

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ – ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ..!

ಚಿಕ್ಕಮಗಳೂರು : ಇತ್ತೀಚೆಗೆ ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಾನದಲ್ಲಿ ಹಾಗೂ ಸುತ್ತಲಿನ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಿತ್ತು. ಇದೀಗ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹೊರನಾಡು ಶ್ರೀ

Live Cricket

Add Your Heading Text Here