ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಸೇರಿ 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಕಳೆದ ಶನಿವಾರ ಆರೋಪಿಗಳನ್ನು ಕೋರ್ಟ್ ವಿಚಾರಣೆ ನಡೆಸಿದ ಬಳಿಕ ದರ್ಶನ್ ಅವರಿಗೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇದೇ ವೇಳೆ ಆರೋಪಿಗಳಲ್ಲಿ ಕೆಲವರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡಲಾಗಿತ್ತು.
ಇಂದು ದರ್ಶನ್ ಗ್ಯಾಂಗ್ ಬಗ್ಗೆ ವಿಚಾರಣೆ ನಡೆಸಿದ 24ನೇ ಎಸಿಎಂಎಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಒಪ್ಪಿಗೆ ಸೂಚಿಸಿದೆ.
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವ್ ಮತ್ತು ನಿಖಿಲ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್ ಮಾಡುವಂತೆ ಕೋರ್ಟ್ ಆದೇಶ ನೀಡಿದೆ.
ಇದನ್ನೂ ಓದಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಕೇಸ್- ಪ್ರಕರಣದ ತನಿಖೆಗೆ ED ಎಂಟ್ರಿ..!
Post Views: 269