Download Our App

Follow us

Home » ಜಿಲ್ಲೆ » ಸಾಹಿತ್ಯೇತರರನ್ನು ಸಮ್ಮೇಳನಾಧ್ಯಕ್ಷರನ್ನಾಗಿಸುವ ಹುನ್ನಾರ – ಸಾಹಿತ್ಯ ವಲಯದಿಂದ ನಾಳೆ ಮಂಡ್ಯದಲ್ಲಿ ಪ್ರತಿರೋಧ..!

ಸಾಹಿತ್ಯೇತರರನ್ನು ಸಮ್ಮೇಳನಾಧ್ಯಕ್ಷರನ್ನಾಗಿಸುವ ಹುನ್ನಾರ – ಸಾಹಿತ್ಯ ವಲಯದಿಂದ ನಾಳೆ ಮಂಡ್ಯದಲ್ಲಿ ಪ್ರತಿರೋಧ..!

ಮಂಡ್ಯ : ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತ್ಯೇತರರನ್ನು ಅಧ್ಯಕ್ಷರನ್ನಾಗಿಸುವ ಹುನ್ನಾರದ ವಿರುದ್ಧ ನಾಡಿನ ಸಾರ್ವಜನಿಕರು ಮತ್ತು ಸಾಹಿತ್ಯ ವಲಯ ನಾಳೆ ಬೆಳಿಗ್ಗೆ 11 ಗಂಟೆಗೆ ಮಂಡ್ಯದಲ್ಲಿ ಸಾಮೂಹಿಕ ಪ್ರತಿರೋಧ ದಾಖಲಿಸಲಿದೆ.

ಸಾಹಿತ್ಯದ ಪರಿಚಾರಿಕೆಗೆ ಜನ್ಮತಾಳಿದ ಕನ್ನಡ ಸಾಹಿತ್ಯ ಪರಿಷತ್ತನ್ನು ಮುನ್ನಡೆಸಬೇಕಾದವರು ಸಾಹಿತಿಗಳೇ ಹೊರತು ರಾಜಕಾರಣಿಗಳೋ, ಮಠಾಧೀಶರೋ, ಇತರ ಕ್ಷೇತ್ರದ ಸಾಧಕರೋ ಅಲ್ಲ. ಅವರಿಗೆ ಮೀಸಲಾದ ಬೇರೆ ವೇದಿಕೆಗಳಿವೆ. ಇದುವರೆಗೂ ನಡೆದುಕೊಂಡು ಬಂದ ಪರಂಪರೆಗೆ ಬೆನ್ನು ತಿರುಗಿಸಿ ಸಾಹಿತಿಗಳನ್ನೇ ಹೊರಗಿಟ್ಟು ಸಮ್ಮೇಳನ ನಡೆಸುವ ಕೆಟ್ಟ ಸಂಪ್ರದಾಯಕ್ಕೆ ಮುನ್ನುಡಿ ಬರೆಯಲು ನಾವು ಬಿಡುವುದಿಲ್ಲ. ಸಾಹಿತ್ಯಾಸಕ್ತಿಗಳ ಮೇಲೆ ನಡೆಯುತ್ತಿರುವ ಈ ದಬ್ಬಾಳಿಕೆಯ ವಿರುದ್ಧ ಎಲ್ಲರೂ ಒಟ್ಟಾಗಿ ನಿಲ್ಲಲಿದ್ದಾರೆ.

ಕುವೆಂಪು ಮೆಚ್ಚಿದ ನಾಲ್ವಡಿ ಹರಸಿದ. ಕೆವಿ ಶಂಕರಗೌಡರು ಕಟ್ಟಿದ ಮಂಡ್ಯದ ನೆಲದಲ್ಲಿ ಈಗಾಗಲೇ ಎರಡು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಘನತೆಯಿಂದ ಜರುಗಿವೆ. 1964ರಲ್ಲಿ ಜಯದೇವಿತಾಯಿ ಲಿಗಾಡೆ, 1994ರಲ್ಲಿ ಚದುರಂಗರ ಅಧ್ಯಕ್ಷತೆಯಲ್ಲಿ ಇಡೀ ನಾಡು ಕೊಂಡಾಡುವಂತೆ ನಮ್ಮ ಮಂಡ್ಯ ಜಿಲ್ಲೆ ಆತಿಥ್ಯ ವಹಿಸಿ. ಸಮ್ಮೇಳನವನ್ನು ಅರ್ಥಪೂರ್ಣವಾಗಿ ನಡೆಸಿಕೊಟ್ಟಿದೆ.

ಈಗ ಒಂದೆಡೆ ಸಮ್ಮೇಳನಾಧ್ಯಕ್ಷತೆಗೆ ಸಾಹಿತ್ಯೇತರರನ್ನು ಮುನ್ನೆಲೆಗೆ ತಂದು. ಇನ್ನೊಂದೆಡೆ ನಾಡಿನ ವಿದ್ವಾಂಸರ ಮಾತಿಗೆ ಗೌರವ ಕೊಡದೆ ಅವಮಾನಿಸಲಾಗುತ್ತಿದೆ. ಏಳು ಕೋಟಿ ಕನ್ನಡಿಗರ ಸಾಹಿತ್ಯ ಸಮ್ಮೇಳನವನ್ನು ಏಕಮುಖವಾಗಿ ಕೊಂಡೊಯ್ಯಲಾಗುತ್ತಿದೆ. ಇದೆಲ್ಲದರ ವಿರುದ್ಧ ನಾಳೆ ಪ್ರತಿರೋಧವಿರಲಿದೆ.

ನಾಳೆ 11.30ಕ್ಕೆ ಮಂಡ್ಯದ ಪತ್ರಕರ್ತರ ಸಂಘದಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿದ್ದು, ಜಿಲ್ಲೆಯ ಹಿರಿಯ ಸಾಹಿತಿಗಳು ಮಾತನಾಡಲಿದ್ದಾರೆ. ನಂತರ ಅಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಕಾಲ್ನಡಿಗೆಯಲ್ಲಿ ಸಾಹಿತ್ಯಾಸಕ್ತರ ಮೌನ ಮೆರವಣಿಗೆ ಸಾಗಲಿದೆ. 12.30ಕ್ಕೆ ಜಿಲ್ಲಾಧಿಕಾರಿಗಳ ಮೂಲಕ ನಾಡಿನ ಮುಖ್ಯಮಂತ್ರಿಗಳಿಗೆ ನಮ್ಮ ಹಕ್ಕೊತ್ತಾಯದ ಪತ್ರ ಸಲ್ಲಿಸಲಿದ್ದೇವೆ. ಈ ಸಂದರ್ಭದಲ್ಲಿ ಕನ್ನಡ ನಾಡಿನ ಸಾಹಿತ್ಯಾಸಕ್ತ ಗೆಳೆಯರೆಲ್ಲರೂ ಜತೆಗೂಡಬೇಕೆಂದು ಮನವಿ ಮಾಡಲಾಗಿದೆ.

ಇದನ್ನೂ ಓದಿ : ರಾಣಿ ಚೆನ್ನಮ್ಮ ವಿಜಯೋತ್ಸವಕ್ಕೆ 200 ವರ್ಷ – ಮೋದಿ ಸರ್ಕಾರದಿಂದ ‘ಅಂಚೆ ಚೀಟಿ’ ಗೌರವ..!

Leave a Comment

DG Ad

RELATED LATEST NEWS

Top Headlines

ನಟ ದರ್ಶನ್​ಗೆ ನಾಳೆ ನಿರ್ಣಾಯಕ ದಿನ – ಏನಾಗಲಿದೆ ಬೇಲ್ ಭವಿಷ್ಯ?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿರುವ ನಟ ದರ್ಶನ್​​ಗೆ ನಾಳೆ ನಿರ್ಣಾಯಕ ದಿನವಾಗಿದೆ. ಮಧ್ಯಂತರ ಜಾಮೀನು ಪಡೆದು ಜೈಲಿಂದ ಹೊರಗೆ ಬಂದಿರುವ ನಟ ದರ್ಶನ್ ಸದ್ಯ

Live Cricket

Add Your Heading Text Here