ಬೆಂಗಳೂರು : ಹೆಣ್ಣು ಮಕ್ಕಳನ್ನು ಹೆದರಿಸಿ ದೂರು ಪಡೆಯಲಾಗುತ್ತಿದೆ, ಎಲ್ಲಾ ಸತ್ಯವನ್ನೂ ಕೆಲ ದಿನಗಳಲ್ಲೇ ಬಹಿರಂಗ ಮಾಡುವೆ. ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ, ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಯತ್ನಿಸಿದ್ದಾರೆ, ದೇವರಾಜೇಗೌಡರನ್ನು ಈಗ ಕೇಸ್ ಹಾಕಿ ಅರೆಸ್ಟ್ ಮಾಡಿದ್ದು ಯಾಕೆ. ಒಂದು ತಿಂಗಳಿನಿಂದ ಏನೆಲ್ಲಾ ಬೆಳವಣಿಗೆ ಆಯ್ತು, ದೊಡ್ಡ ತಿಮಿಂಗಲದ ಆಡಿಯೋ ಬಿಟ್ಟಿದ್ದಕ್ಕೆ ಅರೆಸ್ಟ್ ಮಾಡಿದ್ರಾ..? ಎಂದು ಪ್ರಶ್ನಿಸಿದ್ದಾರೆ.
ಸಂತ್ರಸ್ತೆಯರಿಗೆ ನ್ಯಾಯ ಸಿಗುವ ಪ್ರಯತ್ನ ಮಾಡ್ತಾ ಇಲ್ಲ, ಬದಲಿಗೆ ಈ ಪ್ರಕರಣದಲ್ಲಿ ರಾಜಕಾರಣ ಮಾಡಲಾಗ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಬೆಂಗಳೂರು : ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹ*ತ್ಯೆ..!
Post Views: 52