Download Our App

Follow us

Home » ಅಪರಾಧ » ಮಾಜಿ ಸಚಿವ ರೇವಣ್ಣ ಬೇಲ್ ಅರ್ಜಿ ವಿಚಾರಣೆ ಮುಂದೂಡಿಕೆ..!

ಮಾಜಿ ಸಚಿವ ರೇವಣ್ಣ ಬೇಲ್ ಅರ್ಜಿ ವಿಚಾರಣೆ ಮುಂದೂಡಿಕೆ..!

ಬೆಂಗಳೂರು : ಮಹಿಳೆಯನ್ನು ಕಿಡ್ನಾಪ್ ಮಾಡಿದ ಆರೋಪದ ಮೇಲೆ ಹೆಚ್​​.ಡಿ.ರೇವಣ್ಣ ವಿರುದ್ದ ಕೆ. ಆರ್​​ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಬಂಧನ ಭೀತಿಯಿಂದ ಪಾರಾಗಲು ಮಾಜಿ ಸಚಿವ ಹೆಚ್​.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಆದರೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಅರ್ಜಿ ವಿಚಾರಣೆಯನ್ನು ವಿಶೇಷ ಕೋರ್ಟ್ ಮುಂದೂಡಿದೆ. ಮಧ್ಯಾಹ್ನ 2.45ಕ್ಕೆ ಮುಂದೂಡಿ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ನಡೆಸುತ್ತಿದೆ. ಆದರೆ SIT ಪರ ವಕೀಲ ಬಿ.ಎಂ.ಜಗದೀಶ್ ಅವರು
ಇನ್ನಷ್ಟು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಿ ಎಂದು ಮನವಿ ಮಾಡಿ್ದರು. ಹಿನ್ನಲೆಯಲ್ಲಿ ವಿಚಾರಣೆಯನ್ನು ಮಧ್ಯಾಹ್ನ 2.45ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ : ಪ್ರಜ್ವಲ್​ ರೇವಣ್ಣ ಇವತ್ತಲ್ಲಾ ನಾಳೆ ಬರಲೇಬೇಕು – ಡಾ.ಜಿ.ಪರಮೇಶ್ವರ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here