Download Our App

Follow us

Home » ಅಪರಾಧ » ಲೈಂಗಿಕ ದೌರ್ಜನ್ಯ ಕೇಸ್ : ರೇವಣ್ಣಗೆ ನಾಳೆ ಮಧ್ಯಾಹ್ನದವರೆಗೂ ಮಧ್ಯಂತರ ಜಾಮೀನು..!

ಲೈಂಗಿಕ ದೌರ್ಜನ್ಯ ಕೇಸ್ : ರೇವಣ್ಣಗೆ ನಾಳೆ ಮಧ್ಯಾಹ್ನದವರೆಗೂ ಮಧ್ಯಂತರ ಜಾಮೀನು..!

ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನದಲ್ಲಿದ್ದ ಮಾಜಿ ಸಚಿವ ಹೆಚ್‌.ಡಿ.ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೇ.13ರಂದು ಜಾಮೀನು ಮಂಜೂರು ಮಾಡಿತ್ತು. ಆದರೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಬೇಲ್​​ಗಾಗಿ ರೇವಣ್ಣ ಮತ್ತೆ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ.

ನಾಳೆ ಮಧ್ಯಾಹ್ನದವರೆಗೆ ಮಾತ್ರ ಕೋರ್ಟ್​ ಜಾಮೀನು ನೀಡಿ ಆದೇಶ ಹೊರಡಿಸಿದೆ. ಹಾಸನದ ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ರೇವಣ್ಣ, ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಾದ ಪ್ರತಿವಾದ ಆಲಿಸಿದ ಕೋರ್ಟ್​, ಅಂತಿಮವಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

5 ಲಕ್ಷ ರೂ. ಬಾಂಡ್ ಒದಗಿಸುವಂತೆ ಷರತ್ತು ವಿಧಿಸಿ ಮತ್ತೆ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.

ಇದನ್ನೂ ಓದಿ : ಸರ್ಕಾರ ಬೀಳಿಸಲು ಬಿಜೆಪಿ ಯತ್ನ ಮಾಡಲ್ಲ, ಕಾಂಗ್ರೆಸ್​ನವರೇ ಸರ್ಕಾರ ಬೀಳಿಸಿಕೊಳ್ತಾರೆ : ಜಗದೀಶ್ ಶೆಟ್ಟರ್​..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here