Download Our App

Follow us

Home » ಸಿನಿಮಾ » ‘ರಿದಂ’ ಕಿಂಗ್ ಬಾಲಸುಬ್ರಹ್ಮಣ್ಯಂ ವಿಧಿವಶ – ಸಂಗೀತ ಕ್ಷೇತ್ರದ ದಿಗ್ಗಜನಿಗೆ ಕೆ.ಎಫ್.ಎಂ.ಎ ವತಿಯಿಂದ ತೀವ್ರ ಸಂತಾಪ!

‘ರಿದಂ’ ಕಿಂಗ್ ಬಾಲಸುಬ್ರಹ್ಮಣ್ಯಂ ವಿಧಿವಶ – ಸಂಗೀತ ಕ್ಷೇತ್ರದ ದಿಗ್ಗಜನಿಗೆ ಕೆ.ಎಫ್.ಎಂ.ಎ ವತಿಯಿಂದ ತೀವ್ರ ಸಂತಾಪ!

ಬೆಂಗಳೂರು : ಜನಪ್ರಿಯ ಮೃದಂಗ ವಾದಕ ‘ಬಾಲಿ’ ಎಂದೇ ಪ್ರಸಿದ್ದರಾಗಿದ್ದ ರಿದಂ ಕಿಂಗ್ ಎಸ್​.ಬಾಲಸುಬ್ರಹ್ಮಣ್ಯಂ ಅವರು ಇಂದು  ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಬಾಲಸುಬ್ರಹ್ಮಣ್ಯಂ ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ (ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್) ತೀವ್ರ ಸಂತಾಪ ವ್ಯಕ್ತಪಡಿಸಿದೆ.

ರಿದಂ ಕಿಂಗ್ ಬಾಲಸುಬ್ರಹ್ಮಣ್ಯಂ
ರಿದಂ ಕಿಂಗ್ ಬಾಲಸುಬ್ರಹ್ಮಣ್ಯಂ 

ಬಾಲಿ ಅವರು ನನ್ನಂತಹ ನೂರಾರು ಕಲಾವಿದರನ್ನು ಸಾಕಿ ಬೆಳಸಿದವರು. ಕಲೆಯನ್ನೇ ಉಸಿರಾಗಿ ಇಟ್ಟುಕೊಂಡಿದ್ದವರು. ಬಾಲಸುಬ್ರಹ್ಮಣ್ಯಂ ಅವರ ಸಾವು ನನಗೆ ತುಂಬಾ ದುಃಖ ತಂದಿದೆ. ದೇವರು ಅವರಿಗೆ ಸದ್ಗತಿ ನೀಡಲಿ ಎಂದು ಕೆ.ಎಫ್.ಎಂ.ಎ ಅಧ್ಯಕ್ಷರಾದ ಸಂಗೀತ ನಿರ್ದೇಶಕ ಸಾಧುಕೋಕಿಲ ಅವರು ಸಂತಾಪ ಸೂಚಿಸಿದ್ದಾರೆ.

ಚಿಕ್ಕ ವಯಸ್ಸಿನಲ್ಲಿಯೇ ಮೃದಂಗ ಕಲಿಕೆ ಆರಂಭಿಸಿದ್ದ ಬಾಲಿ ಅವರು ಡೋಲಕ್, ಮೃದಗಂ, ತಬಲಾ ವಾದ್ಯಗಳನ್ನು ನುಡಿಸುವಲ್ಲೂ ಪರಿಣಿತರಾಗಿದ್ದರು. ಡ್ರಮ್ಸ್, ಬ್ಯಾಂಗೋ, ಕಾಂಗೋಸ್​ಗಳಲ್ಲಿ ಕೂಡ ಅವರಿಗೆ ಅಸಾಧಾರಣ ಪರಿಣಿತಿ ಇತ್ತು. ಸುಗಮ ಸಂಗೀತದ ಹಿರಿಯ ಕಲಾವಿದರಾದ ಬಾಳಪ್ಪ ಹುಕ್ಕೇರಿ, ಪಿ.ಕಾಳಿಂಗ ರಾವ್, ಮೈಸೂರು ಅನಂತ ಸ್ವಾಮಿ, ಸಿ.ಅಶ್ವತ್ಥ್ ಮೊದಲಾದವರ ಸಂಯೋಜನೆಯ ವಾದ್ಯಗೋಷ್ಟಿಗಳನ್ನು ಅವರು ನಿರ್ವಹಿಸಿದ್ದರು.

ಕನ್ನಡದ ಮೊದಲ ಭಾವಗೀತೆಗಳ ಧ್ವನಿಮುದ್ರಿಕೆ ಕವಿ ನಿಸಾರ್​ ಅಹಮದ್ ಅವರ ‘ನಿತ್ಯೋತ್ಸವ’ದಿಂದಲೂ ಅವರು ಸಕ್ರಿಯರಾಗಿದ್ದರು. ಜಿ.ಕೆ.ವೆಂಕಟೇಶ್, ವಿಜಯಭಾಸ್ಕರ್, ಎಂ.ರಂಗರಾವ್, ಡಾ.ರಾಜೀವ ತಾರಾನಾಥ್, ಅಶ್ವತ್ಥ್-ವೈದಿಯವರು ಸಂಯೋಜಿಸಿದ್ದ ಚಿತ್ರಗೀತೆಗಳಿಗೆ ಬಾಲಿ ಅವರು ಕೆಲಸ ಮಾಡಿದ್ದರು. ಶಂಕರ್ ನಾಗ್ ಅವರ ಸಂಕೇತ್ ಸ್ಟುಡಿಯೋ ನಿರ್ಮಾಣದಲ್ಲೂ ಬಾಲಿ ಅವರು ಬಹಳ ಮುಖ್ಯವಾದ ಪಾತ್ರವನ್ನು ವಹಿಸಿದ್ದರು. ಹಿನ್ನೆಲೆ ಸಂಗೀತದ ಬಗ್ಗೆ ಅಡಿಯೋ-ವಿಡಿಯೋ-ಓದುವ ಹೀಗೆ ಮೂರು ಅಯಾಮದ ಪುಸ್ತಕವನ್ನು ಬರೆದಿದ್ದ ಬಾಲಿ ಅವರು ತಮ್ಮ ‘ರಮ್ಯ ಕಲ್ಚರಲ್ ಅಕಾಡೆಮಿ’ಯ ಮೂಲಕ ನೂರಾರು ಹೊಸ ಕಲಾವಿದರನ್ನು ರೂಪಿಸಿದ್ದರು. ಜೀ ಟಿವಿಯ ಜನಪ್ರಿಯ ಕಾರ್ಯಕ್ರಮ ‘ಸರಿಗಮಪ’ದ ತೀರ್ಪುಗಾರರ ಮಂಡಳಿಯಲ್ಲೂ ಬಾಲಿ ಅವರಿದ್ದರು.

ಇನ್ನೂ ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್, ಅರೇಂಜರ್ಕಂ, ಡಕ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಬಾಲಿ ಅವರ ಸಂಗೀತ ಸೇವೆಗೆ ಹಲವು ಪ್ರಶಸ್ತಿಗಳು ದಕ್ಕಿವೆ. ಕರ್ನಾಟಕ ಕಲಾಶ್ರೀ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಅವರ ಪಾಲಾಗಿದ್ದವು. ಎಸ್​.ಬಾಲಸುಬ್ರಹ್ಮಣ್ಯಂ ನಿಧನದಿಂದ ಸಂಗೀತ ಲೋಕಕ್ಕೆ ಅತೀ ದೊಡ್ಡ ನಷ್ಟವಾಗಿದೆ.

ಇದನ್ನೂ ಓದಿ : ಕೃಷ್ಣಂ ಪ್ರಣಯ ಸಖಿ ಸಕ್ಸಸ್ ಬಳಿಕ “ಗಣಿ” ಹೊಸ ಸಿನಿಮಾ – ಕ್ಷುದ್ರ, ರುದ್ರನ ಅವತಾರದಲ್ಲಿ ಗೋಲ್ಡನ್ ಸ್ಟಾರ್..!

Leave a Comment

DG Ad

RELATED LATEST NEWS

Top Headlines

ಮತ್ತೊಂದು ಸ್ಟಾರ್ ಜೋಡಿಯ ಡಿವೋರ್ಸ್ ಪಕ್ಕಾನಾ – ಇನ್‌ಸ್ಟಾಗ್ರಾಂನಲ್ಲಿ ಅನ್‌ಫಾಲೋ ಮಾಡಿದ ದಂಪತಿ!

ಮುಂಬೈ: ಟಿಂ ಇಂಡಿಯಾದ ಆಲ್​​ರೌಂಡರ್​ ಹಾರ್ದಿಕ್ ಪಾಂಡ್ಯಾ ಡಿವೋರ್ಸ್​ ಬೆನ್ನಲ್ಲೇ ಇದೀಗ ಭಾರತ ಕ್ರಿಕೆಟ್ ತಂಡದ ಮತ್ತೋರ್ವ ಆಟಗಾರನ ವಿಚ್ಛೇದನ ಸುದ್ದಿ ವ್ಯಾಪಕ ಚರ್ಚೆಯಾಗುತ್ತಿದೆ.  ಭಾರತದ ತಂಡದ

Live Cricket

Add Your Heading Text Here