Download Our App

Follow us

Home » ರಾಜ್ಯ » ಕನೌಜ್ ರೈಲು ನಿಲ್ದಾಣದಲ್ಲಿ ಮೇಲ್ಛಾವಣಿ ಕುಸಿತ – 23 ಕಾರ್ಮಿಕರ ರಕ್ಷಣೆ, ಮುಂದುವರಿದ ಕಾರ್ಯಾಚರಣೆ..!

ಕನೌಜ್ ರೈಲು ನಿಲ್ದಾಣದಲ್ಲಿ ಮೇಲ್ಛಾವಣಿ ಕುಸಿತ – 23 ಕಾರ್ಮಿಕರ ರಕ್ಷಣೆ, ಮುಂದುವರಿದ ಕಾರ್ಯಾಚರಣೆ..!

ಲಕ್ನೋ : ಉತ್ತರ ಪ್ರದೇಶದ ಕನೌಜ್ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಛಾವಣಿ ಕುಸಿದು ಬಿದ್ದಿದ್ದು, ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಘಟನೆ ಶನಿವಾರ ನಡೆದಿದೆ. ಈಗಾಗಲೇ 23 ಕಾರ್ಮಿಕರನ್ನು ರಕ್ಷಿಸಲಾಗಿದೆ.

ಇಂದು ಮಧ್ಯಾಹ್ನ ಈ ಅವಘಡ ಸಂಭವಿಸಿದ್ದು, ನಿಲ್ದಾಣದ ನಿರ್ಮಾಣದ ಯೋಜನೆಯ ಭಾಗವಾಗಿ ಎರಡು ಅಂತಸ್ತಿನ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಕಟ್ಟಡ ಮೇಲ್ಛಾವಣಿ ಕುಸಿದಿದೆ. ಸಮಯದಲ್ಲಿ 35 ಕಾರ್ಮಿಕರು ಸ್ಥಳದಲ್ಲಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ರೈಲ್ವೆ, ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಆಗಮಿಸಿದ್ದಾರೆ. ಅವರ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ.

ರಾಜ್ಯ ಸರ್ಕಾರ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 5000 ರೂ. ಪರಿಹಾರವನ್ನು ಘೋಷಿಸಿದೆ. ರಕ್ಷಣಾ ಕಾರ್ಯಚರಣೆಯ ಸಹಾಯಕ್ಕಾಗಿ ಲಕ್ನೋದಿಂದ ರಾಜ್ಯ ವಿಪತ್ತು ಪರಿಹಾರ ಪಡೆಯನ್ನು ಕರೆಯಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಈಶಾನ್ಯ ರೈಲ್ವೆ ತಿಳಿಸಿದೆ.

ಇದನ್ನೂ ಓದಿ : “ಕೇಳೋ ಮಚ್ಚಾ”.. ಎರಡನೇ ಹಾಡನ್ನು ಘೋಷಿಸಿದ “ಜಸ್ಟ್ ಮ್ಯಾರೀಡ್” ಟೀಂ..!

Leave a Comment

DG Ad

RELATED LATEST NEWS

Top Headlines

ರೋಮ್ಯಾನ್ಸ್ ಸೀನ್​ ಶೂಟಿಂಗ್ ಮಾಡುವಾಗ ಕಂಟ್ರೋಲ್ ತಪ್ಪಿದ್ರಾ ವರುಣ್ ಧವನ್ ? – ನಟಿ ಜೊತೆಗಿನ ಹಾಟ್​ ವಿಡಿಯೋ ಲೀಕ್​!

ಮುಂಬೈ : ಬಾಲಿವುಡ್​ನಲ್ಲಿ ಯಂಗ್ ಹೀರೋ ಆಗಿ ಗುರುತಿಸಿಕೊಂಡಿರುವ ನಟ ವರುಣ್ ಧವನ್ ಸಿನಿಮಾದ ರೋಮ್ಯಾನ್ಸ್ ಸೀನ್​ ಶೂಟಿಂಗ್ ವೇಳೆ ಕಂಟ್ರೋಲ್ ತಪ್ಪಿದ್ರಾ ಎಂಬ ಚರ್ಚೆಗಳು ಶುರುವಾಗಿವೆ. ನಟ

Live Cricket

Add Your Heading Text Here