ಬೆಂಗಳೂರು : ದರ್ಶನ್‌ಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಕಲಬುರಗಿ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್ ಆದೇಶ ಪ್ರಕಟಿಸಿದೆ.
ವಿಲ್ಸನ್ ಗಾರ್ಡನ್ ನಾಗ ಸೇರಿ ಆತನ ಗ್ಯಾಂಗ್ನಲ್ಲಿ ಬಂಧನ ಆಗಿದ್ದ 20 ಜನರೂ ಕೂಡ ಬೇರೆ ಬೇರೆ ಜೈಲಿಗೆ ವರ್ಗವಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾತಿಥ್ಯ ಕೊಟ್ಟಿದ್ದ ಆರೋಪ ವಿಲ್ಸನ್ ಗಾರ್ಡನ್ ನಾಗನ ಮೇಲಿತ್ತು. ನಾಗನ ಶಿಫ್ಟ್ ಮಾಡಲು ಜೈಲು ಅಧಿಕಾರಿಗಳು ಹಾಗೂ ಬೆಂಗಳೂರು ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು.
ಕಳೆದ ವಾರವೇ ಕಲಬುರಗಿಗೆ ನಾಗ ಶಿಫ್ಟ್ ಆಗಬೇಕಿತ್ತು. ಆದರೇ ಕೋರ್ಟ್ ತೀರ್ಪನ್ನು ನಿನ್ನೆಗೆ ಕಾಯ್ದಿರಿಸಿತ್ತು. ನಿನ್ನೆ ವಿಚಾರಣೆ ನಡೆಸಿದ ಕೋರ್ಟ್ ನಾಗ ಅಂಡ್ ಗ್ಯಾಂಗ್ ಶಿಫ್ಟ್ ಮಾಡಲು ಅನುಮತಿ ನೀಡಿದೆ. ಸದ್ಯ ಇಂದಿನಿಂದ ನಾಗ ಹಾಗೂ ಆತನ ಗ್ಯಾಂಗ್ ಆಟಕ್ಕೆ ಬ್ರೇಕ್ ಬೀಳಲಿದ್ದು, ಎಲ್ಲರನ್ನೂ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.
ಕಳೆದ ವರ್ಷ ಆಗಸ್ಟ್‌ನಲ್ಲಿ ಸಿದ್ದಪುರ ಮಹೇಶ್‌ನನ್ನ ನಾಗ ತಂಡ ಕೊಚ್ಚಿ ಕೊಲೆ ಮಾಡಿತ್ತು. ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗಡೆ ಬಂದ ಕೇವಲ ಇನ್ನೂರು ಮೀಟರ್ ಅಂತರದಲ್ಲೇ ಸಿದ್ದಪುರ ಮಹೇಶನನ್ನು ಆರೋಪಿಗಳು ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಬರೋಬ್ಬರಿ ಇಪ್ಪತ್ತು ಜನರನ್ನು ಬಂಧನ ಮಾಡಲಾಗಿದೆ.
ಇದನ್ನೂ ಓದಿ : ಗಂಡ ಪ್ರತಿನಿತ್ಯ ಸ್ನಾನ ಮಾಡೊಲ್ಲ ಎಂದು ಮದುವೆಯಾದ 40 ದಿನಕ್ಕೆ ಡಿವೋರ್ಸ್ ಕೇಳಿದ ಹೆಂಡತಿ..!