ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ಚಾಕುವಿನಿಂದ ಮಾರಣಾಂತಿಕ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಂಬೈ ಪೊಲೀಸರು ಓರ್ವ ಶಂಕಿತ ಆರೋಪಿಯನ್ನು ಬಂಧಿಸಿದ್ದಾರೆ.
ಸದ್ಯ ಬಾಂದ್ರಾ ಪೊಲೀಸರು ಶಂಕಿತ ಆರೋಪಿಯನ್ನು ಠಾಣೆಗೆ ಕರೆ ತಂದಿದ್ದು, ಅಲ್ಲಿ ಆತನ ವಿಚಾರಣೆ ನಡೆಸಲಾಗುತ್ತಿದೆ. ದಾಳಿ ಮಾಡಿದರ ಹಿಂದಿನ ಉದ್ದೇಶ ಏನು? ಆತ ಸೈಫ್ ಮನೆ ತಲುಪಿದ್ದು ಹೇಗೆ? ಈ ದಾಳಿ ಹಿಂದೆ ಬೇರೆ ಯಾರದ್ದಾದರೂ ಕೈವಾಡ ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.
ಘಟನೆಯ ನಂತರ ಶಂಕಿತ ವ್ಯಕ್ತಿ ಬಾಂದ್ರಾ ರೈಲು ನಿಲ್ದಾಣದ ಬಳಿ ಕಾಣಿಸಿಕೊಂಡಿದ್ದ ಎಂದು ಮೂಲಗಳು ತಿಳಿಸಿವೆ. ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು ಬಂಧಿಸಲು ಒಟ್ಟು 20 ತಂಡಗಳನ್ನು ರಚಿಸಿದ್ದ ಪೊಲೀಸರು, ತಾಂತ್ರಿಕ ದತ್ತಾಂಶಗಳ ಸಂಗ್ರಹಣೆ ಮತ್ತು ಮಾಹಿತಿದಾರರ ಮಾಹಿತಿಯನ್ನು ಆಧರಿಸಿ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ.
ಸದ್ಯ ಬಂಧಿತ ಆರೋಪಿಯೇ ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಅವರ ಮೇಲೆ ದಾಳಿ ಮಾಡಿದ್ದ ಎಂಬುದರ ಕುರಿತು ಯಾವುದೇ ಪುರಾವೆ ಇಲ್ಲ ಎಂದಿರುವ ಪೊಲೀಸರು, ಶಂಕಿತ ಆರೋಪಿಯ ವಿಚಾರಣೆ ಬಳಿಕವೇ ಸತ್ಯ ಗೊತ್ತಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : ‘ಹಿಂಡನ್ಬರ್ಗ್’ ಸಂಸ್ಥೆ ಕ್ಲೋಸ್ – ಅದಾನಿ ಸಾಮ್ರಾಜ್ಯವನ್ನೇ ನಡುಗಿಸಿದವರಿಗೆ ಆಗಿದ್ದೇನು?