Download Our App

Follow us

Home » ಸಿನಿಮಾ » ಸಮರ್ಜಿತ್ ಲಂಕೇಶ್ ನಟನೆಯ “ಗೌರಿ” ಸಿನಿಮಾದ ಮೊದಲ ಸಾಂಗ್​ ರಿಲೀಸ್..!

ಸಮರ್ಜಿತ್ ಲಂಕೇಶ್ ನಟನೆಯ “ಗೌರಿ” ಸಿನಿಮಾದ ಮೊದಲ ಸಾಂಗ್​ ರಿಲೀಸ್..!

ಪತ್ರಕರ್ತ, ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಬಸವನಗುಡಿಯ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ, ಸಾವಿರಾರು ವಿದ್ಯಾರ್ಥಿಗಳ ಸಮ್ಮಖದಲ್ಲಿ “ಗೌರಿ” ಚಿತ್ರದ ಮೊದಲ ಹಾಡು ಲೋಕಾರ್ಪಣೆಯಾಯಿತು.

ಇಂದ್ರಜಿತ್ ಲಂಕೇಶ್, ಸಮರ್ಜಿತ್ ಲಂಕೇಶ್, ಸಾನ್ಯಾ ಅಯ್ಯರ್, ಅವಿನಾಶ್, ವಿಷ್ಣು ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ವಿಜಯ್ ಈಶ್ವರ್ ಬರೆದಿರುವ “ಟೈಮ್ ಬರತ್ತೆ” ಎಂಬ ಹಾಡು ಈ ಚಿತ್ರದ ಚೊಚ್ಚಲಗೀತೆಯಾಗಿ ಬಿಡುಗಡೆಯಾಗಿದ್ದು, ಖ್ಯಾತ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಯವಜನತೆಗೆ ಹತ್ತಿರವಾಗಿರುವ ಈ ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ಹಾಡು ಬಿಡುಗಡೆ ನಂತರ ಮಾತನಾಡಿದ ನಿರ್ಮಾಪಕ, ನಿರ್ದೇಶಕ ಇಂದ್ರಜಿತ್ ಲಂಕೇಶ್, ಇಂದು “ಗೌರಿ” ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದೆ. ಐದು ಜನ ಸಂಗೀತ ನಿರ್ದೇಶಕರು ಈ ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಭಾರತದ ಹನ್ನೆರಡಕ್ಕೂ ಅಧಿಕ ಹೆಸರಾಂತ ಗಾಯಕರು “ಗೌರಿ” ಚಿತ್ರದ ಹಾಡುಗಳನ್ನು ಹಾಡಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಇದರ ಜೊತೆಗೆ ಈ ಹಾಡಿಗೆ ನಾಯಕ ಸಮರ್ಜಿತ್, ನಾಯಕಿ ಸಾನ್ಯಾ ಅಯ್ಯರ್ ಹಾಗೂ ನಟಿ ಸಂಯುಕ್ತ ಹೆಗಡೆ ರೀಲ್ಸ್ ಕೂಡ ಮಾಡಿದ್ದಾರೆ‌. ಈ ಹಾಡಿನ ಲಿರಿಕಲ್ ವಿಡಿಯೋ ಹಾಗೂ ರೀಲ್ಸ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಉಳಿದ ಹಾಡುಗಳು ಅನಾವರಣವಾಗಲಿದೆ. ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ‌‌ ಎಂದರು. “ಗೌರಿ” ಚಿತ್ರದ ಮೊದಲ ಹಾಡಿಗೆ ಸಿಗುತ್ತಿರುವ ಮೆಚ್ಚುಗೆಗೆ ಮನ ತುಂಬಿ ಬಂದಿದೆ ನಿಮ್ಮೆಲ್ಲರ ಹಾರೈಕೆ ನಮ್ಮ ಚಿತ್ರಕ್ಕಿರಲಿ ಎಂದು ನಾಯಕ ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ಹೇಳಿದರು.

ಇದನ್ನೂ ಓದಿ : ಚಿತ್ರದುರ್ಗ : SSLC ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here