ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ “ಕಾಂಗರೂ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಮಾತಿನ ಜೋಡಣೆ(ಡಬ್ಬಿಂಗ್) ಸಹ ಪೂರ್ಣವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ನಡೆದಿದೆ.
“ಕಾಂಗರೂ” ಚಿತ್ರ ಕನ್ನಡ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ.
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಮೋಷನ್ ಪೋಸ್ಟರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಒಬ್ಬರು ನಮ್ಮ ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಲಿದ್ದಾರೆ. “ಕಾಂಗರೂ” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಿರುವ ಸೂಪರ್ ಸ್ಟಾರ್ ಯಾರು ಎಂಬುದನ್ನು ಸದ್ಯದಲ್ಲೇ ತಿಳಿಸುವುದಾಗಿ ನಿರ್ದೇಶಕ ಕಿಶೋರ್ ಮೇಗಳಮನೆ ಹೇಳಿದ್ದಾರೆ.
ಆದಿತ್ಯ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ರಾಮಚಂದ್ರಯ್ಯ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ನಿರ್ದೇಶಕ ಕಿಶೋರ್ ಮೇಗಳಮನೆ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಬರೆದಿದ್ದಾರೆ, ಸಾಧುಕೋಕಿಲ ಸಂಗೀತ ನೀಡಿದ್ದಾರೆ. ಉದಯ್ ಲೀಲ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.
ಇದನ್ನೂ ಓದಿ : 4 ವರ್ಷದ ಕಂದನ ಕೊಲ್ಲೋಕೆ ಸುಚನಾ ಮಾಡಿದ್ದೇನು ಗೊತ್ತಾ?