Download Our App

Follow us

Home » ರಾಷ್ಟ್ರೀಯ » RBI ನೂತನ ಗವರ್ನರ್ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ – ಯಾರಿವರು?

RBI ನೂತನ ಗವರ್ನರ್ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ – ಯಾರಿವರು?

ನವದೆಹಲಿ : ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ನೂತನ ಗವರ್ನರ್‌ ಆಗಿ ಕಂದಾಯ ಕಾರ್ಯದರ್ಶಿ ಸಂಜಯ್‌ ಮಲ್ಹೋತ್ರಾ ಅವರನ್ನು ನೇಮಕ ಮಾಡಲಾಗಿದೆ.‌

ಹಾಲಿ ಗರ್ವನರ್‌ ಶಕ್ತಿಕಾಂತ ದಾಸ್‌ ಅವರ ಅಧಿಕಾರಾವಧಿ ಇಂದು (ಡಿ.10) (ಮಂಗಳವಾರ) ಕೊನೆಗೊಳ್ಳಲಿದೆ. ಡಿಸೆಂಬರ್‌ 11ರಂದು ಬುಧವಾರ ರಿಸರ್ವ್‌ ಬ್ಯಾಂಕ್‌ನ ಮುಂದಿನ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ಅಧಿಕಾರ ಸ್ವೀಕರಿಸಲಿದ್ದಾರೆ. ಮುಂದಿನ ಮೂರು ವರ್ಷಗಳ ಕಾಲ ಅವರು ಕೇಂದ್ರೀಯ ಬ್ಯಾಂಕ್‌ ಅನ್ನು ಮುನ್ನಡೆಸಲಿದ್ದಾರೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಸಂಜಯ್‌ ಮಲ್ಹೋತ್ರಾ ಪರಿಚಯ : 

ಸಂಜಯ್‌ ಮಲ್ಹೋತ್ರಾ ಅವರು 1990ರ ಬ್ಯಾಚ್‌ನ ರಾಜಸ್ಥಾನ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿದ್ದಾರೆ. ಅವರು ಈ ಹಿಂದೆ ಸರ್ಕಾರಿ ಸ್ವಾಮ್ಯದ ಆರ್‌ಇಸಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಅಲ್ಲದೇ ತೆರಿಗೆ ಸಂಗ್ರಹ ಇತ್ತೀಚಿನ ದಿನಗಳಲ್ಲಿ ಭಾರೀ ಏರಿಕೆ ಕಾಣುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಬಜೆಟ್‌ ವಿಚಾರದಲ್ಲಿ ತೆರಿಗೆ ಸಂಬಂಧಿತ ಪ್ರಸ್ತಾವನೆಗಳನ್ನು ಅವರು ಪರಿಶೀಲಿಸುತ್ತಿದ್ದರು. ಜಿಎಸ್‌ಟಿ ಕೌನ್ಸಿಲ್‌ನ ಪದನಿಮಿತ್ತ ಕಾರ್ಯದರ್ಶಿಯಾಗಿ ಹಾಗೂ ಸರಕು ಮತ್ತು ಸೇವಾ ತೆರಿಗೆಯಲ್ಲಿ ರಾಜ್ಯಗಳ ನಿರೀಕ್ಷೆಗಳ ವಿಚಾರಗಳಂಥ ಕ್ಲಿಷ್ಟ ಸಂದರ್ಭಗಳನ್ನು ಜಾಣ್ಮೆಯಿಂದ ನಿಭಾಯಿಸಿದ್ದರು.

ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿರುವ ಮಲ್ಹೋತ್ರಾ ಅವರು, ಯುಎಸ್‌ನ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 33 ವರ್ಷಗಳ ತಮ್ಮ ವೃತ್ತಿಜೀವನದಲ್ಲಿ ವಿದ್ಯುತ್‌, ಹಣಕಾಸು, ತೆರಿಗೆ, ಮಾಹಿತಿ ತಂತ್ರಜ್ಞಾನ, ಗಣಿ ಇನ್ನೂ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ಹಣಕಾಸು ಮತ್ತು ತೆರಿಗೆ ಇಲಾಖೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

ಇದನ್ನೂ ಓದಿ : ಎಸ್​​.ಎಂ.ಕೃಷ್ಣ ವಿಧಿವಶ – ಕರ್ನಾಟಕದಲ್ಲಿ 3 ದಿನ ಶೋಕಾಚರಣೆ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ..!

Leave a Comment

DG Ad

RELATED LATEST NEWS

Top Headlines

“ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಸಿನಿಮಾದ 2ನೇ ಹಾಡು ರಿಲೀಸ್ – ಚಿತ್ರತಂಡಕ್ಕೆ ಗೋವಾ ಸಿಎಂ ಸಾಥ್..!

“ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಲನಚಿತ್ರದ ಎರಡನೇ ಮರಾಠಿ ಲಿರಿಕಲ್‌ ವಿಡಿಯೋ ಜನವರಿ 14ರಂದು ಗೋವಾ ಮುಖ್ಯಮಂತ್ರಿಗಳ ನಿವಾಸದಲ್ಲಿ ಬಿಡುಗಡೆಯಾಗಿದೆ. ಗೋವಾದ ಸಿಎಂ ಪ್ರಮೋದ ಸಾವಂತ್

Live Cricket

Add Your Heading Text Here