Download Our App

Follow us

Home » ರಾಷ್ಟ್ರೀಯ » ಬಿಸಿಲ ಬೇಗೆಗೆ ತುತ್ತಾದ ಸೌದಿ ಅರೇಬಿಯಾ – 900ಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವು..!

ಬಿಸಿಲ ಬೇಗೆಗೆ ತುತ್ತಾದ ಸೌದಿ ಅರೇಬಿಯಾ – 900ಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವು..!

ಇಸ್ಲಾಂ ಧರ್ಮದ ಪವಿತ್ರ ಹಜ್‌ ಯಾತ್ರೆ ವೇಳೆ ಮೆಕ್ಕಾದಲ್ಲಿ ದಾಖಲಾದ 51.8 ಡಿಗ್ರಿ ಸೆಲ್ಸಿಯಸ್‌ ತಾಪಮಾನದಿಂದ 900ಕ್ಕೂ ಹೆಚ್ಚು ಯಾತ್ರಿಕರು ಸಾವನ್ನಪ್ಪಿದ್ದಾರೆ. ಈ ಪೈಕಿ 68 ಮಂದಿ ಭಾರತೀಯರೂ ಸಾವನ್ನಪ್ಪಿದ್ದಾರೆಂದು ಅರಬ್‌ ರಾಜತಾಂತ್ರಿಕರು ಮಾಹಿತಿ ನೀಡಿದ್ದಾರೆ. ಈ ವರ್ಷ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಹಜ್ ಯಾತ್ರೆಗೆ ತೆರಳಿದ್ದರು.

ಸೌದಿ ಅರೇಬಿಯಾದಲ್ಲಿ ವಿಪರೀತ ಶಾಖ ಮತ್ತು ಸರಿಯಾದ ವ್ಯವಸ್ಥೆಗಳ ಕೊರತೆಯಿಂದಾಗಿ ಹಜ್ ಯಾತ್ರಿಕರು ಸಾಯುತ್ತಿದ್ದು, ಜನರು ತಮ್ಮ ಕುಟುಂಬಿಕರ ದೇಹಗಳನ್ನು ವಾಪಸ್ ತಾಯ್ನಾಡಿಗೆ ಕರೆತರಲು ಸಂಕಷ್ಟ ಪಡುತ್ತಿದ್ದಾರೆ. ಆದರೆ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ಸೌದಿ ಅಧಿಕಾರಿಗಳು ಬುಧವಾರ ಹೇಳಿದ್ದಾರೆ.

ಮೆಕ್ಕಾ ಸಮೀಪದ ಅಲ್-ಮುಯಿಸಂನಲ್ಲಿ ಸೌದಿ ಸರ್ಕಾರದ ತುರ್ತು ಸೇವೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿ ಜನರು ತಮ್ಮ ಕಾಣೆಯಾದ ಕುಟುಂಬ ಸದಸ್ಯರ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ. ಸರ್ಕಾರ ಬಿಡುಗಡೆ ಮಾಡಿರುವ ಪಟ್ಟಿಯ ಪ್ರಕಾರ ಈವರೆಗೂ 900ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ 18 ಲಕ್ಷಕ್ಕೂ ಜನರು ಈ ಬಾರಿ ಹಜ್ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಇನ್ನು ಹಜ್ ಯಾತ್ರೆಯಲ್ಲಿ 68 ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ AFP ವರದಿ ಮಾಡಿದೆ. ಈಜಿಪ್ಟ್‌ ಮೂಲದ ಕನಿಷ್ಠ 600 ಜನರು ಸಾವನ್ನಪ್ಪಿದ್ದಾರೆ. ಪ್ರಪಂಚದಾದ್ಯಂತ ಬರುವ ಸಾವಿನ ವರದಿಗಳನ್ನು ಎಣಿಸಿದ ನಂತರ ಸೌದಿ ಅರೇಬಿಯಾದಲ್ಲಿ ಹಜ್ ಯಾತ್ರೆಯ ಸಮಯದಲ್ಲಿ ಇದುವರೆಗೆ 900ಕ್ಕೂ ಸಾವುಗಳು ಸಂಭವಿಸಿವೆ ಎಂದು AFP ಹೇಳಿದೆ.

ಇದನ್ನೂ ಓದಿ : ಜಾಮೀನು ಅರ್ಜಿ ಬಗ್ಗೆ ದರ್ಶನ್ ಪರ ವಕೀಲರು ಹೇಳಿದ್ದೇನು?

Leave a Comment

DG Ad

RELATED LATEST NEWS

Top Headlines

ಪ್ರಭಾಸ್‌ ಜೊತೆಗೆ ಒಂದಲ್ಲ ಎರಡಲ್ಲ ಮೂರು ಸಿನಿಮಾಗಳನ್ನು ಘೋಷಿಸಿದ ಹೊಂಬಾಳೆ ಫಿಲಂಸ್‌..!

ಕನ್ನಡ ಚಿತ್ರಂಗಕ್ಕೆ ಮಾತ್ರ ಸೀಮಿತವಾಗದ ಹೊಂಬಾಳೆ ಫಿಲಂಸ್‌ ಸಂಸ್ಥೆ ಪರಭಾಷೆ ಸಿನಿಮಾಗಳಿಗೆ ಬಂಡವಾಳ ಹೂಡುವ ಮೂಲಕ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಕೆಜಿಎಫ್‌, ಕೆಜಿಎಫ್‌ 2, ಕಾಂತಾರ, ಸಲಾರ್‌, ಈಗ

Live Cricket

Add Your Heading Text Here