Download Our App

Follow us

Home » ಅಪರಾಧ » ಗ್ಯಾರಂಟಿಗಳಿಗೆ SC/ST ಸಮುದಾಯದ ನಿಧಿ ಬಳಕೆ ಆರೋಪ : 7 ದಿನದಲ್ಲಿ ವರದಿ ನೀಡುವಂತೆ ಸರ್ಕಾರಕ್ಕೆ ಪರಿಶಿಷ್ಟ ಜಾತಿ ಆಯೋಗ ಸೂಚನೆ..!

ಗ್ಯಾರಂಟಿಗಳಿಗೆ SC/ST ಸಮುದಾಯದ ನಿಧಿ ಬಳಕೆ ಆರೋಪ : 7 ದಿನದಲ್ಲಿ ವರದಿ ನೀಡುವಂತೆ ಸರ್ಕಾರಕ್ಕೆ ಪರಿಶಿಷ್ಟ ಜಾತಿ ಆಯೋಗ ಸೂಚನೆ..!

ಬೆಂಗಳೂರು :  ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ದಾಳಿ ಮಾಡಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ತೀವ್ರ ವಿಚಾರಣೆ ನಡೆಸಿದ ED ಅಧಿಕಾರಿಗಳು ಈಗಾಗಲೇ ಈ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್​​ನ್ನೂ​ ಅರೆಸ್ಟ್​ ಮಾಡಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೇ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಮೀಸಲಾಗಿದ್ದ ನಿಧಿಗಳನ್ನು ಬೇರೆ ಉದ್ದೇಶಕ್ಕೆ ಬಳಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ವಾಲ್ಮೀಕಿ 187 ಕೋಟಿ ನುಂಗಿದ ಸಿದ್ದರಾಮಯ್ಯ ಸರ್ಕಾರಕ್ಕೆ ದಲಿತರು ಮತ್ತು ಶೋಷಿತರ ಅಭಿವೃದ್ಧಿಗಾಗಿ ಮೀಸಲಿಟ್ಟ 14 ಸಾವಿರ ಕೋಟಿ ಗ್ಯಾರಂಟಿಗಳಿಗೆ ವರ್ಗಾಯಿಸುವ ವಿರುದ್ದ ಕೇಂದ್ರ SC/ST ಆಯೋಗದಿಂದ ಸುಮೋಟೊ ಕೇಸ್​​ ದಾಖಲಾಗಿದೆ.

ಸುಮೋಟೊ ಕೇಸ್ ದಾಖಲಿಸಿರುವ ಆಯೋಗ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ವಿವರಣೆ ಕೇಳಿದೆ. 7 ದಿನಗಳ ಒಳಗಾಗಿ ಸಂಪೂರ್ಣ ವರದಿ ನೀಡುವಂತೆ ಪತ್ರದಲ್ಲಿ ಸೂಚನೆ ನೀಡಲಾಗಿದೆ. ಅಲ್ಲದೇ ಇದನ್ನು ಅತ್ಯಂತ ತುರ್ತು ಎಂದು ಪರಿಗಣಿಸಬೇಕೆಂದು  ಆಯೋಗ ತನ್ನ ಪತ್ರದಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ : ನೆಲಮಂಗಲ : ಚಲಿಸುತ್ತಿದ್ದ ಸ್ಕೂಟರ್​​ನಲ್ಲಿ ಕಾಣಿಸಿಕೊಂಡ ಬೆಂಕಿ – ನೋಡ ನೋಡ್ತಿದ್ದಂತೆ ರಸ್ತೆ ಮಧ್ಯೆ ಧಗಧಗನೆ ಹೊತ್ತಿ ಉರಿದ ಸ್ಕೂಟರ್​​..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here