ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ದುರಂತ ಸಂಭವಿಸಿದೆ. ನಿರ್ಮಾಣ ಹಂತದ ಸ್ಕೂಲ್ ಬಿಲ್ಡಿಂಗ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ.
ಗಾಯಾಳು ಕಾರ್ಮಿಕರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ ಕೆಲವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದೆ.
ಎರಡನೇ ಮಹಡಿಯ ನಿರ್ಮಾಣದ ವೇಳೆ ಕಟ್ಟಡ ಕುಸಿದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.
ಇದನ್ನೂ ಓದಿ : ಕೋಲಾರ : ಶ್ರೀರಾಮನ ಬಗ್ಗೆ ಅವಹೇಳನಕಾರಿ ವಿಡಿಯೋ ಹರಿಬಿಟ್ಟಿದ್ದ ಇಬ್ಬರು ಆರೋಪಿಗಳು ವಶಕ್ಕೆ..!
Post Views: 305