Download Our App

Follow us

Home » ರಾಜ್ಯ » ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಸಿಗಲಿದೆ ಬಿಸಿಯೂಟ…!

ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಸಿಗಲಿದೆ ಬಿಸಿಯೂಟ…!

ಬೆಂಗಳೂರು : ರಾಜ್ಯದಲ್ಲಿರುವ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕ ದಲ್ಲಿ 2023-24ನೇ ಸಾಲಿನಲ್ಲಿ ತೀವ್ರ ಮಳೆಯ ಕೊರತೆ ಇರುವ ಕಾರಣ ಬರ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆ ಬೇಸಿಗೆ ರಜಾ ಅವಧಿಯಲ್ಲೂ ವಿದ್ಯಾರ್ಥಿಗಳಿಗೆ ಬೇಸಿಗೆ ಊಟ ವಿತರಿಸುವಂತೆ ಸರ್ಕಾರ ಆದೇಶ ನೀಡಿದೆ

ಶಿಕ್ಷಣ ಇಲಾಖೆಯು ಮುಂಬರುವ ಏಪ್ರಿಲ್‌- ಮೇ ತಿಂಗಳಿನಲ್ಲಿ ಬಿಸಿಯೂಟ ನೀಡಲು ಇಚ್ಛಿಸಿದೆ. ಕರ್ನಾಟಕ ಸರ್ಕಾರದ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020 ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಸಮೀಕ್ಷೆಯ ವರದಿಯನ್ವಯ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ 223 ತಾಲ್ಲೂಕುಗಳನ್ನು ಬರ ಪಿಡೀತ ತಾಲ್ಲೂಗಳೆಂದು ಸರ್ಕಾರ ಘೋಷಿಸಿದೆ.

1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಒಟ್ಟು 41 ದಿನಗಳ ಕಾಲ ಬೇಸಿಗೆ ಬಿಸಿಯೂಟ ಸಿಗಲಿದೆ. ಬರಪೀಡಿತ ತಾಲೂಕಗಳಲ್ಲಿರುವ ಮಕ್ಕಳಿಗಾಗಿ ಬಿಸಿ ಊಟದ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ : ಎಷ್ಟೇ ವರುಷಗಳು ಕಳೆದ್ರೂ ಬಾಬರಿ ಮಸೀದಿ ಕಟ್ಟುತ್ತೇವೆ ಎಂದು ಪೋಸ್ಟ್ ಹಾಕಿದ್ದವನ ವಿರುದ್ಧ ಕೇಸ್ ದಾಖಲು..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾ*ವು..!

ಉಡುಪಿ : 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶವಿದೆ. ಹಾಗಾಗಿ ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಪಿ.ಯಶೋಧಾ ನಾರಾಯಣ ಉಪಾಧ್ಯ

Live Cricket

Add Your Heading Text Here