ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಾಯಕರ ಮೈಸೂರು ಚಲೋ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಬಿಡದಿಯಿಂದ ಪಾದಯಾತ್ರೆ ಆರಂಭವಾಗಿದೆ.
ನಿನ್ನೆ ಬೆಂಗಳೂರಿನ ಕೆಂಗೇರಿಯಿಂದ ಪಾದಯಾತ್ರೆ ಆರಂಭಿಸಿದ ನಾಯಕರು ಬಿಡದಿಯಲ್ಲಿ ರಾತ್ರಿ ವಿಶ್ರಾಂತಿ ಪಡೆದರು. ಇಂದು ಬಿಡದಿಯಿಂದ 2ನೇ ದಿನದ ಮೈಸೂರು ಪಾದಯಾತ್ರೆ ಆರಂಭವಾಗಿದೆ. ಪಾದಯಾತ್ರೆ ಇಂದು ಸುಮಾರು 22 ಕಿ.ಮೀ. ದೂರ ಸಾಗಲಿದೆ. ಸಂಜೆ 4.30ಕ್ಕೆ ರಾಮನಗರದಲ್ಲಿ ಮೈತ್ರಿಯ ಬೃಹತ್ ಸಮಾವೇಶ ನಡೆಯಲಿದೆ. ರಾತ್ರಿ ಕೆಂಗಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಇಂದಿನ ಪಾದಯಾತ್ರೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭಾಗಿಯಾಗಿದ್ದು, ಬಿಜೆಪಿ ಎಸ್ಸಿ ಮೋರ್ಚಾಗೆ ಎರಡನೇ ದಿನದ ಪಾದಯಾತ್ರೆ ಜವಾಬ್ದಾರಿ ನೀಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಮಟೆ ಬಾರಿಸುವುದರ ಮೂಲಕ ಎರಡನೇ ದಿನದ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ.
ಇದನ್ನೂ ಓದಿ : ‘ಗೂಢಚಾರಿ’ ಸಿನಿಮಾಗೆ ಆರು ವರ್ಷದ ಸಂಭ್ರಮ – ನಟ ಅಡಿವಿ ಶೇಷ್ ಹೇಳಿದ್ದೇನು?