Download Our App

Follow us

Home » ರಾಜಕೀಯ » ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲಾಗುತ್ತದೆ – ಎಂ.ಬಿ ಪಾಟೀಲ್ ಸ್ಪಷ್ಟನೆ..!

ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲಾಗುತ್ತದೆ – ಎಂ.ಬಿ ಪಾಟೀಲ್ ಸ್ಪಷ್ಟನೆ..!

ಬೆಂಗಳೂರು : ಮುಂಬೈ ಸೇರಿದಂತೆ ಇತರ ಪ್ರಮುಖ ನಗರಗಳು ಎರಡನೇ ವಿಮಾನ ನಿಲ್ದಾಣ ಹೊಂದಿರುವಂತೆ ಬೆಂಗಳೂರಿನಲ್ಲೂ ಎರಡನೇ ವಿಮಾನ ನಿಲ್ದಾಣ ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿದ್ದು, ಸ್ಥಳವನ್ನು ಅಂತಿಮಗೊಳಿಸಿಲ್ಲ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬೆಂಗಳೂರು ಹೊರತಾಗಿ ಬೇರೆ ಕಡೆ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಯೋಜನೆ ಇದೆಯಾ ಎನ್ನುವ ಬಿಜೆಪಿ ಸದಸ್ಯ ನವೀನ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆ ರೀತಿಯ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಬೆಂಗಳೂರಿಗೆ 2 ನೇ ವಿಮಾನ ನಿಲ್ದಾಣ ಮಾಡುವ ಪ್ಲಾನ್ ಇದೆ ಎಂದಿದ್ದಾರೆ.

ನಮಗೆ 2033ರವರೆಗೂ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಗ್ರಿಮೆಂಟ್ ಇದೆ. ಆ ನಂತರ ನಾವು ಮತ್ತೊಂದು ವಿಮಾನ ನಿಲ್ದಾಣ ಮಾಡಬಹುದು. ಈಗಿನಿಂದಲೇ ಪ್ರಸ್ತಾಪ ಮಾಡುತ್ತಿದ್ದೇವೆ. ಏಳೆಂಟು ಜಾಗ ಗುರುತಿಸಿದ್ದೇವೆ, ಏರ್ ಪೋರ್ಟ್ ಜಾಗ ಮೆರಿಟ್ ಮೇಲೆ ಮಾಡುತ್ತೇವೆ. ಸೂಕ್ತ ಮಾನದಂಡದ ಮೇಲೆ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಗುರಿ ಇದೆ. ಲಾಜಿಸ್ಟಿಕ್, ಪ್ಯಾಸೆಂಜರ್ ಕನೆಕ್ಟಿವಿಟಿ ನೋಡಿ ಬೆಂಗಳೂರು ರಾಜ್ಯಕ್ಕೆ ಅನುಕೂಲವಾಗುವ ರೀತಿಯಲ್ಲೇ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನೂ ಚಿತ್ರದುರ್ಗದಲ್ಲಿ ಜಿಲ್ಲಾ ವಿಮಾನ ನಿಲ್ದಾಣ ಮಾಡೋಣ, ಆದರೆ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಅತಿ ಅಗತ್ಯ ಮತ್ತು ಸೂಕ್ತ ಸ್ಥಳವಾಗಿದೆ, ಆದರೆ ಚಿತ್ರದುರ್ಗಕ್ಕೆ ಕೈಗಾರಿಕೆ ಸ್ಥಾಪಿಸುವ ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ : ವಿಧಾನಸಭೆ ಅಧಿವೇಶನದಲ್ಲೂ ಕರಾವಳಿ ಮಳೆಯ ಪ್ರಸ್ತಾಪ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಿನ M.S.ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ..!

ಬೆಂಗಳೂರು : ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಒಂದಾಗಿರುವ M.S.ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳು, ಆಸ್ಪತ್ರೆ ಸಿಬ್ಬಂದಿಗೆ ತೀವ್ರ

Live Cricket

Add Your Heading Text Here